ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಆಶ್ರಯದಲ್ಲಿರುವ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಎನ್.ಎಸ್.ಎಸ್., ಯೂತ್ ರೆಡ್ಕ್ರಾಸ್ ಮತ್ತು ಆರ್.ಆರ್.ಸಿ. ಘಟಕಾಧಿಕಾರಿಯಾಗಿ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಆಗಿರುವ ಡಾ. ಪ್ರಜ್ಞ ಎಂ.ಆರ್. ಅವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಪ್ರಧಾನ ಕಾರ್ಯದರ್ಶಿಗಳಾದ ಡಾ| ರೇಣುಕಾಪ್ರಸಾದ್ ಕೆ.ವಿ. ಯವರು ನೇಮಕಗೊಳಿಸಿದ್ದಾರೆ.
ಇವರು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದಲ್ಲಿ ಕಳೆದ 16 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಡಾ. ಮನುಜೇಶ್ ಬಿ.ಜೆ. ಯವರ ಪತ್ನಿ ಹಾಗೂ ರಾಘವ ಗೌಡ ಮದುವೆಗದ್ದೆ ಮತ್ತು ಶ್ರೀಮತಿ ಕಮಲಾಕ್ಷಿ ಯು.ಪಿ. ದಂಪತಿಗಳ ಪ್ರಥಮ ಪುತ್ರಿಯಾಗಿರುತ್ತಾರೆ.