ಸುಳ್ಯ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಹಾಗೂ ೬೦೦ ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಮೇ.23 ರಂದು ನಡೆಯಿತು.
ಶಿಕ್ಷಣ ಸಂಸ್ಥೆ ವತಿಯಿಂದ ನಡೆದ ಅಭಿನಂದನಾ ಸಮಾರಂಭವನ್ನು ಸೈಂಟ್ ಬ್ರಿಜಿಡ್ಸ್ ಚರ್ಚ್ನ ಧರ್ಮ ಗುರುಗಳು, ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯ ಸಂಚಾಲಕ ರೆ.ಪಾ ವಿಕ್ಟರ್ ಡಿ ಸೋಜ ಉದ್ಘಾಟಿಸಿ, ವಿದ್ಯಾರ್ಥಿಗಳನ್ನು ಅಭಿನಂದಿಸಿ ಗೌರವಿಸಿದರು.
ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಬಿನೋಮ, ಶಿಕ್ಷಕ ರಕ್ಷಕ ಸಮಿತಿ ಅಧ್ಯಕ್ಷರುಗಳಾದ ಅಕ್ಷತ ಶೆಟ್ಟಿ, ಅರುಳಪ್ಪನ್ ಮಾಸ್ಟರ್, ಸೈಂಟ್ ಬ್ರಿಜಿಡ್ಸ್ ಚರ್ಚ್ ಪಾಲನ ಸಮಿತಿ ಕಾರ್ಯದರ್ಶಿ ಜೂಲಿಯಾನ ಕ್ರಾಸ್ತ,ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯ ಹಳೆ ವಿದ್ಯಾರ್ಥಿ ಜಿತೇಂದ್ರ, ಸಾಧಕ ವಿದ್ಯಾರ್ಥಿಗಳ ಪೋಷಕರು, ಮೊದಲಾದವರು ಉಪಸ್ಥಿತರಿದ್ದರು.
ಶಿಕ್ಷಕ ಸಮಿತಿ ಕಾರ್ಯದರ್ಶಿ ಶಿಕ್ಷಕಿ ಚೇತನ ಸ್ವಾಗತಿಸಿ ಶಿಕ್ಷಕಿ ಅನಿತಾ ವಂದಿಸಿ, ಶಿಕ್ಷಕಿ ಕಲಾವತಿ ಹಾಗೂ ಸವಿತಾ ಕಾರ್ಯಕ್ರಮ ನಿರೂಪಿಸಿದರು.