ಗ್ರೀನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ಎಸ್ಎಲ್ಸಿ ಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಮೇ.23 ರಂದು ನಡೆಯಿತು.
ಕಾರ್ಯಕ್ರಮವನ್ನು ದ.ಕ ಜಿಲ್ಲಾ ಹಾಗೂ ಉಡುಪಿ ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಮೂಸಬ್ಬ ಬ್ಯಾರಿ ಉದ್ಘಾಟಿಸಿದರು.
ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಅಬ್ದುಲ್ ಮಜೀದ್ ಜನತಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ತೆಕ್ಕಿಲ್ ಪ್ರತಿಷ್ಠಾನ ಅಧ್ಯಕ್ಷ ಟಿ ಎಂ ಶಹೀದ್, ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಲತೀಫ್ ಹರ್ಲಡ್ಕ, ಗಾಂಧಿನಗರ ಜುಮ್ಮಾ ಮಸೀದಿ ಸಮಿತಿ ಅಧ್ಯಕ್ಷ ಹಾಜಿ ಮುಸ್ತಫಾ ಜನತಾ, ಅನ್ಸಾರ್ ಅಧ್ಯಕ್ಷ ಹಾಜಿ ಅಬ್ದುಲ್ ಶುಕೂರ್,ಅನ್ಸಾರಿಯ ಎಜುಕೇಶನ್ ಸೆಂಟರ್ ಕೋಶಾಧಿಕಾರಿ ಆದಂ ಹಾಜಿ ಕಮ್ಮಾಡಿ, ಅಲ್ಪ ಸಂಖ್ಯಾತರ ಸೊಸೈಟಿ ಅಧ್ಯಕ್ಷ ಇಕ್ಬಾಲ್ ಎಲಿಮಲೆ, ನಗರ ಪಂಚಾಯತ್ ಸದಸ್ಯರಾದ ಉಮ್ಮರ್ ಕೆ ಎಸ್, ಶರೀಫ್ ಕಂಠಿ, ಹಾಜಿ ಗ್ರೀನ್ ಶಿಕ್ಷಣ ಸಂಸ್ಥೆ ಸಂಚಾಲಕ ಮುಹ್ಯದ್ದೀನ್ ಪ್ಯಾನ್ಸಿ,ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಜಿ ಐ ಇಸ್ಮಾಯಿಲ್, ಆಡಳಿತ ಸಮಿತಿ ನಿರ್ದೇಶಕರಾದ ಶಾಫಿ ಕುತ್ತಮೊಟ್ಟೆ, ಇಬ್ರಾಹಿಂ ಕೆ ಬಿ, ಮೊದಲಾದವರು ಉಪಸ್ಥಿತರಿದ್ದರು.
ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯ ಅಬ್ದುಲ್ ರಹೀಮ್ ಸ್ವಾಗತಿಸಿ, ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.