ನ್ಯಾಯಾಲಯ ಕಟ್ಟಡಕ್ಕೆ ಅನುದಾನ ಬಿಡುಗಡೆಗೆ ಮನವಿ
ಸುಳ್ಯ ವಕೀಲರ ಸಂಘದ ವತಿಯಿಂದ ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಸುನಿಲ್ ಕುಮಾರ್ ಇವರನ್ನು ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಭೇಟಿಯಾಗಿ ಸುಳ್ಯ ನ್ಯಾಯಾಲಯದ ನೂತನ ಕಟ್ಟಡಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಗೆ ವಿನಂತಿಸಿಕೊಳ್ಳಲಾಯಿತು.
ಸಚಿವರು ವಕೀಲರ ಸಂಘದ ಅಹವಾಲನ್ನು ಪರಿಗಣಿಸಿ ತಕ್ಷಣ ಪಿ ಡಬ್ಯು ಡಿ ಇಲಾಖೆಯ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅನುದಾನ ಬಿಡುಗಡೆ ಬಗ್ಗೆ ಸಂಬಂಧಿಸಿದ ಕಚೇರಿ ಕೆಲಸಗಳನ್ನು ಅತಿ ಶೀಘ್ರದಲ್ಲಿ ಮುಗಿಸುವಂತೆ ಸೂಚಿಸಿರುತ್ತಾರೆ.
ಈ ಸಂದರ್ಭದಲ್ಲಿ ಸುಳ್ಯ ವಕೀಲರ ಸಂಘದ ಅಧ್ಯಕ್ಷ ನಾರಾಯಣ ಕೆ, ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಸುಳ್ಯ ವಕೀಲರ ಸಂಘದ ಕಾರ್ಯದರ್ಶಿ ವಿನಯ್ ಕುಮಾರ್ ಮುಳುಗಾಡು, ಉಪಾಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಕೋಶಾಧಿಕಾರಿ ಜಗದೀಶ್ ಡಿ ಪಿ, ಕ್ರೀಡಾ ಕಾರ್ಯದರ್ಶಿ ಸತೀಶ್ ಕುಂಭಕೋಡು, ಸುಳ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ಜೊತೆಗಿದ್ದರು.