ಸರ್ಕಾರದ ಜಲಜೀವನ್ ಮಿಷನ್ ಯೋಜನೆಯ ಕುರಿತು ಬೀದಿನಾಟಕ ಕಾರ್ಯಕ್ರಮವು ಕನಕಮಜಲಿನಲ್ಲಿ ಮೇ.25ರಂದು ಜರುಗಿತು.
ಕನಕಮಜಲಿನ ಶ್ರೀ ನರಿಯೂರು ರಾಮಣ್ಣ ಗೌಡ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮಕ್ಕೆ ಗ್ರಾ. ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ, ಕಾರ್ಯದರ್ಶಿ ರಮೇಶ್, ಹಾಗೂ ಗ್ರಾ.ಪಂ. ಸದಸ್ಯರುಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.