ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಸಂಸ್ಥಾಪಕ ಕುಮಾರ್ ನಾಯರ್ ಅವರ ಪತ್ನಿ ಶ್ರೀಮತಿ ಭಾರ್ಗವಿ ನಾಯರ್ ಅವರ 70 ನೇ ವರ್ಷದ ಹುಟ್ಟುಹಬ್ಬವನ್ನು ಕುಮಾರಸ್ವಾಮಿ ವಿದ್ಯಾಲಯದಲ್ಲಿ ಮೇ.25 ರಂದು ಆಚರಿಸಲಾಯಿತು.
ಮುಖ್ಯ ಅತಿಥಿ ನೆಲೆಯಲ್ಲಿ ಭಾಗವಹಿಸಿದ್ದ ಏನೆಕಲ್ಲು ಪ್ರಾಥ ಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಭರತ್ ನೆಕ್ರಾಜೆ ಭಾರ್ಗವಿ ನಾಯರ್ ಅವರ ಬಗ್ಗೆ ವಿಚಾರ ಮಂಡಿಸಿದರು. ಸಭೆಯ ಅಧ್ಯಕ್ಷತೆಯನ್ನು ಅನುಗ್ರಹ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಗಣೇಶ್ ನಾಯರ್ ವಹಿಸಿದ್ದರು. ವೇದಿಕೆಯಲ್ಲಿ ಅನುಗ್ರಹ ಎಜುಕೇಶನ್ ಟ್ರಸ್ಟ್ ನ ಸಂಚಾಲಕ ಚಂದ್ರಶೇಖರ ನಾಯರ್, ಉಪಾಧ್ಯಕ್ಷ ಶಿವರಾಮ ಏನೆಕಲ್ಲು, ಸದಸ್ಯರುಗಳಾದ ವೆಂಕಟ್ರಾಜು, ಯಜ್ಞೆಶ್ ಆಚಾರ್, ಜಿತೇಶ್, ಕುಮಾರಸ್ವಾಮಿ ಸ್ವಾಮಿ ಪದವಿ ಪೂರ್ವ ಕಾಲೇಜಿನ ನಿಯೋಜಿತ ಪ್ರಾಂಶುಪಾಲ ಸಂಕೀರ್ಥ ಹೆಬ್ಬಾರ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪ್ರಸಾದ್ ಮುನಿಯಂಗಳ, ಉಪಸ್ಥಿತರಿದರು. ವಿದ್ಯಾರ್ಥಿನಿ ಇಂಚರಾ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ವಿದ್ಯಾರ್ಥಿ ಲೋಕೇಶ್ ಚೌಹಾಣ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮ ಬಳಿಕ ಸಾಂಸ್ಕ್ರತಿಕ ಕಾರ್ಯಕ್ರಮ ಜರಗಿತು.