ಸುಳ್ಯ ಪ್ರೆಸ್ಕ್ಲಬ್ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಶ್ರೀ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ವತಿಯಿಂದ ರೂ. ಒಂದು ಲಕ್ಷವನ್ನು ಮೇ. 25 ರಂದು ಮಠದ ಆಡಳಿತಾಧಿಕಾರಿ ಸುದರ್ಶನ್ ಜೋಯಿಸ್ರವರು ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ರವರಿಗೆ ನೀಡಿದರು.
ಈ ಸಂದರ್ಭದಲ್ಲಿ ಪ್ರೆಸ್ಕ್ಲಬ್ ಖಜಾಂಜಿ ಯಶ್ವಿತ್ ಕಾಳಂಮನೆ, ನಿರ್ದೇಶಕರುಗಳಾದ ಜಯಪ್ರಕಾಶ್ ಕುಕ್ಕೆಟ್ಟಿ, ಲೋಕೇಶ್ ಪೆರ್ಲಂಪಾಡಿ, ಸುಳ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪದ್ಮನಾಭ ಮುಂಡೋಕಜೆ, ಪತ್ರಕರ್ತ ಶಿವರಾಮ ಕಜೆಮೂಲೆ, ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಆಡಳಿತ ಮೊಕ್ತೇಸರ ಕಾರ್ಯಪ್ಪ ಗಡ ಚಿಕ್ಮುಳಿ ಉಪಸ್ಥಿತರಿದ್ದರು.