ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಾಲಯದ 2 ಮತ್ತು 3ನೇ ಹಂತದ ಮಾಸ್ಟರ್ ಪ್ಲಾನರಿ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯು ಇಂದು ದೇವಾಲಯದ ಸಭಾಂಗಣದಲ್ಲಿ ನಡೆಯಿತು.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ರವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ಕುಮಾರ್, ದೇವಳದ ಆಡಳಿತ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಕಡಬ ತಹಶಿಲ್ದಾರ್ ಅನಂತಶಂಕರ, ಸುಬ್ರಹ್ಮಣ್ಯ ಗ್ರಾ.ಪಂ. ಅಧ್ಯಕ್ಷೆ ಲಲಿತಾ ಗುಂಡಡ್ಕ, ದೇವಾಲಯದ ಆಡಳಿತ ಸಮಿತಿಯ ಸದಸ್ಯರು, ಮಾಸ್ಟರ್ ಪ್ಲಾನರಿ ಸಮಿತಿ ಸದಸ್ಯರು, ಅರಣ್ಯ, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. ಸಭೆಯ ಬಳಿಕ ಮಾಸ್ಟರ್ ಪ್ಲಾನ್ ಕಾಮಾಗಾರಿಗಳ ಪರಿಶೀಲನೆ ನಡೆಸಿದರು.