ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಮೈದಾನದಲ್ಲಿ ಮೇ. 28 ಮತ್ತು 29 ರಂದು ಸಂಕಲ್ಪ ಫೌಂಡೇಷನ್ ಹಾಗೂ ಮಂಗಳೂರು ಯೂತ್ಸ್ ಆಯೋಜಿಸಿರುವ *ಎಂ.ಎಲ್.ಎ. ಪ್ರೀಮಿಯರ್ ಲೀಗ್* ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಕ್ರಿಕೆಟ್ ತಂಡದ ಜೆರ್ಸಿಯನ್ನು ತಂಡದ ಮಾಲಕರಾದ ಕ್ಷೇತ್ರದ ಶಾಸಕರು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಬಿಡುಗಡೆಗೊಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ್ ರೈ ಕೆಡೆಂಜಿ, ಸುಬೋಧ್ ಶೆಟ್ಟಿ ಮೇನಾಲ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಗುರುದತ್ ನಾಯಕ್, ಮಂಡಲ ಯುವಮೋರ್ಚಾ ಅಧ್ಯಕ್ಷ ಕೃಷ್ಣ ಎಂ.ಆರ್. ಪ್ರಮುಖರಾದ ಚನಿಯ ಕಲ್ತಡ್ಕ, ಹರೀಶ್ ಬೂಡುಪನ್ನೆ, ಜಗದೀಶ್ ಸರಳಿಕುಂಜ, ಸುಧಾಕರ ಅಡ್ಯಡ್ಕ ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು.