ಅಮರಪಡ್ನೂರು ಗ್ರಾಮದ ಖಂಡಿಗೆಮೂಲೆ ಎಂಬಲ್ಲಿ ಕಳೆದ ರಾತ್ರಿ ಸಮಯದಲ್ಲಿ ಭಾರಿ ಗಾತ್ರದ ಮಾವಿನ ಮರವೊಂದು ವಿದ್ಯುತ್ ಲೈನ್ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಟ್ರ್ಯಾನ್ಸ್ ಫಾರ್ಮರ್ ಅಳವಡಿಸಿದ್ದ ವಿದ್ಯುತ್ ಕಂಬ ಸೇರಿದಂತೆ ಮೂರು ವಿದ್ಯುತ್ ಕಂಬಗಳು ತುಂಡಾಗಿದೆ ಎಂದು ತಿಳಿದು ಬಂದಿದೆ. ರಾತ್ರಿ ವೇಳೆಯಲ್ಲಿ ಘಟನೆ ಸಂಭವಿಸಿದ್ದರಿಂದ ಯವುದೇ ರೀತಿಯ ಅನಾಹುತ ಸಂಭವಿಸಿಲ್ಲ. ಬೆಳಗ್ಗೆ ವಿಷಯ ತಿಳಿದು ಸ್ಥಳೀಯರು ಮೆಸ್ಕಾಂ ಇಲಾಖೆಗೆ ತಿಳಿಸಿದರು. ಸ್ಥಳೀಯರು ಸೇರಿದಂತೆ ಮೆಸ್ಕಾಂ ಇಲಾಖೆಯ ನೌಕರರು ಸೇರಿ ಮರ ತೆರವುಗೊಳಿಸಿ ವಿದ್ಯುತ್ ಲೈನ್ ದುರಸ್ತಿ ಪಡಿಸುವ ಕಾರ್ಯ ಕೈಗೊಂಡಿದ್ದಾರೆ.