ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ 2022-23ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ಪ್ರವೇಶೋತ್ಸವ ಆಗತ ಸ್ವಾಗತ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವು ಮೇ.31ರಂದು ಬೆಳಿಗ್ಗೆ ಜರುಗಲಿದೆ.
ಮುಖ್ಯ ಅತಿಥಿಗಳಾಗಿ ತಹಶಿಲ್ದಾರ್ ಕು. ಅನಿತಾಲಕ್ಷ್ಮಿ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ಶ್ರೀ ರಾಮಚಂದ್ರಾಪುರ ಮಠದ ಹವ್ಯಕ ಮಹಾಮಂಡಲದ ಉಪಾಧ್ಯಕ್ಷೆ ಶ್ರೀಮತಿ ಶೈಲಜಾ ಭಟ್ ಅವರು ಉಪಸ್ಥಿತರಿರಲಿದ್ದಾರೆ.