ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಕುಕ್ಕೆ ಸುಬ್ರಹ್ಮಣ್ಯ ಲೀಜನ್ ಹಾಗೂ ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು .
ಕುಕ್ಕೆ ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಸ್ಥಾಪಕಾಧ್ಯಕ್ಷ ಸೀನಿಯರ್ ವಿಶ್ವನಾಥ ನಡುತೋಟ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಪುಸ್ತಕದ ಪ್ರಾಯೋಜಕರುಗಳಾದ ಸುಬ್ರಹ್ಮಣ್ಯ ರೋಟರಿ ಕ್ಲಬ್ ಪೂರ್ವಾಧ್ಯಕ್ಷ ವಸಂತ ಕುಮಾರ್ ಕೆದಿಲ ,ಪಂಜ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ಮುತ್ತಪ್ಪಗೌಡ ಬೂದಿ ಪಳ್ಳ, ಶಾಲಾ ಮುಖ್ಯ ಶಿಕ್ಷಕಿ ಲೀಲಾಕುಮಾರಿ ಟಿ, ಶಾಲಾ ಎಸ್. ಡಿ.ಎಂ.ಸಿ ಅಧ್ಯಕ್ಷ ಜೆ .ಸಿ. ಸೋಮಶೇಖರ ನೇರಳ ,ಸುಬ್ರಹ್ಮಣ್ಯ ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ರೊ.
ಗೋಪಾಲ ಎಣ್ಣೆಮಜಲು ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲೀಜನ್ ಸೀನಿಯರ್ ಪ್ರಕಾಶ ಕಟ್ಟೆಮನೆ ಉಪಸ್ಥಿತರಿದ್ದರು.