ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇದರಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣ ಹೊಂದಿದ ವಿದ್ಯಾರ್ಥಿ ಗಳಾದ ಮನುಶ್ರೀ ಕೆ. (612), ದಿಶಾ ಎಂ.ವಿ. (598), ರೀನಾ ಪಿ.ಕೆ.(598), ಪ್ರತೀಕ್ ಎಂ.(589), ಕಾರ್ತಿಕ್ ಪಿ.(579), ರೇಖಾಶ್ರೀ ಎನ್.(576), ಚೈತನ್ಯ ಪಿ.(575), ರಚನ್ (568), ಚೈತ್ರಾ ಕೆ.(547) ಇವರನ್ನು ಶಾಲಾ ಆಡಳಿತ ಮಂಡಳಿಯ ವತಿಯಿಂದ ಮೇ.27 ರಂದು ಅಭಿನಂದಿಸಲಾಯಿತು.
ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರು, ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ರವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಸಂಚಾಲಕ ರಾಧಾಕೃಷ್ಣ ಬೊಳ್ಳೂರು ಶುಭಹಾರೈಸಿದರು. ಉಪಾಧ್ಯಕ್ಷ ಅಣ್ಣಾಜಿ ಗೌಡ, ಖಜಾಂಜಿ ಹರ್ಷವರ್ಧನ ಬೊಳ್ಳೂರು ಹಾಗೂ ನಿರ್ದೇಶಕರುಗಳಾದ ಅರುಣ್ ಕುಮಾರ್ ನಾಯರ್ ಕಲ್ಲು, ಆನಂದ ಗೌಡ ಚಿಲ್ಪಾರು, ಸುಪ್ರೀತ್ ಮೋಂಟಡ್ಕ, ವೆಂಕಟ್ರಮಣ ಇಟ್ಟಿಗುಂಡಿಯವರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಸಂಕೀರ್ಣ ಚೊಕ್ಕಾಡಿ ಸ್ವಾಗತಿಸಿದರು .ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ತೇಜಸ್ವಿ ಕಡಪಳ ವಂದಿಸಿದರು. ಶಿಕ್ಷಕಿ ಸಂಧ್ಯಾ ಕುಮಾರಿಯವರು ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.