ಅಮೃತ ಭಾರತಿಗೆ ಕನ್ನಡದ ಆರತಿ
ಆಕರ್ಷಕ ಮೆರವಣಿಗೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ
ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಡೆಯುತ್ತಿರುವ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮವು ಬೆಳ್ಳಾರೆಯಲ್ಲಿ ಆರಂಭಗೊಂಡಿದೆ.
ಬೆಳ್ಳಾರೆಯ ಮುಖ್ಯ ಪೇಟೆಯಲ್ಲಿ ಆಕರ್ಷಕ ಮೆರವಣಿಗೆ ನಡೆಯಿತು.
ಸಚಿವ ಎಸ್. ಅಂಗಾರ, ದಕ್ಷಿಣ ಕನ್ನಡ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಪುತ್ತಾರು ಸಹಾಯಕ ಕಮೀಷನರ್ ಗಿರೀಶ್ ನಂದನ್, ತಹಶೀಲ್ದಾರ್ ಅನಿತಾ ಲಕ್ಷ್ಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಮೊದಲಾದವರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಘ ಸಂಸ್ಥೆಗಳ ಕಾರ್ಯಕರ್ತರು, ಸರಕಾರಿ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ನೂರಾರು ಮಂದಿ ಮೆರವಣಿಗೆಯಲ್ಲಿದ್ದರು.
ಬೆಳ್ಳಾರೆಯ ಬಂಗ್ಲೆಗುಡ್ಡೆಗೆ ಮೆರವಣಿಗೆ ಸಾಗಿ ಬಂದ ಬಳಿಕ ಸುಳ್ಯದ ಅಮರ ಸ್ವಾತಂತ್ರ್ಯ ಹೋರಾಟ ಸಾರುವ ಬೀದಿ ನಾಟಕ ಪ್ರದರ್ಶಿಸಲಾಯಿತು. ಹೋರಾಟದ ಸ್ಮರಣ ಫಲಕವನ್ನು ಬಂಗ್ಲೆಗುಡ್ಡೆಯಲ್ಲಿ ಅನಾವರಣಗೊಳಿಸಲಾಯಿತು.