ಪ.ಜಾತಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಸುಳ್ಯ ಇಲ್ಲಿ “ಋತುಸ್ರಾವ ನೈರ್ಮಲ್ಯ ನಿರ್ವಹಣೆ ದಿನ”ವನ್ನು ಮೇ. 28 ರಂದು ಆಚರಿಸಲಾಯಿತು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರವಿಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ಜಯಶ್ರೀ ಕೆ.ಎಸ್.ರವರು ವಿದ್ಯಾರ್ಥಿನಿಯರಿಗೆ ಋತುಸ್ರಾವ ನೈರ್ಮಲ್ಯ ನಿರ್ವಹಣೆಯ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಪ. ಜಾತಿ ಮೆಟ್ರಿಕ್-ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಸುಳ್ಯ, ಅಜ್ಜಾವರ ಹಾಗೂ ಪ.ವರ್ಗದ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಸುಳ್ಯ ಇಲ್ಲಿಯ ವಿದ್ಯಾರ್ಥಿನಿಯರು, ವಾರ್ಡನ್ ಹಾಗೂ ಅಡುಗೆ ಸಿಬ್ಬಂದಿಯವರು ಉಪಸ್ಥಿತರಿದ್ದರು. ಪ. ಜಾತಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ- ಸುಳ್ಯ ಇಲ್ಲಿಯ ವಾರ್ಡನ್ ಅರ್ಷಿಯ ಸ್ವಾಗತಿಸಿ, ಪ. ವರ್ಗದ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ- ಸುಳ್ಯ ಇಲ್ಲಿಯ ವಾರ್ಡನ್ ಶ್ರೀಮತಿ ಕಾವ್ಯ ವಂದಿಸಿದರು.