ತೊಡಿಕಾನದ ಗ್ರಾಮದ ದೊಡ್ಡಕುಮೇರಿ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮೇ. 28 ರಂದು ತೊಡಿಕಾನ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಜೀರ್ಣೋದ್ದಾರ ಸಮಿತಿ ಗೌರವಾಧ್ಯಕ್ಷ ಹರೀಶ್ ಕಂಜಿಪಿಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಆಡಳಿತ ಸಮಿತಿ ಅಧ್ಯಕ್ಷ ಕೇಪು ದೊಡ್ಡಕುಮೇರಿ ಅಧ್ಯಕ್ಷತೆ ವಹಿಸಿದ್ದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಪ್ರಾಸ್ತಾವಿಕವಾಗಿ ಮಾತನಾಡಿ ಬ್ರಹ್ಮಕಲಶೋತ್ಸವದ ಕಾರ್ಯಕ್ರಮಗಳ ಕುರಿತು ವಿವರಿಸಿದರು. ವಿವಿಧ ಸಮಿತಿಗಳ ಜವಾಬ್ದಾರಿ ಕುರಿತು ಹರೀಶ್ ಕಂಜಿಪಿಲಿ ಮಾಹಿತಿ ನೀಡಿದರು. ಜೀರ್ಣೋದ್ದಾರ ಸಮಿತಿ ಕಾರ್ಯಾಧ್ಯಕ್ಷ ಕಿಶೋರ್ ಕುಮಾರ್ ಉಳುವಾರು , ಆಡಳಿತ ಸಮಿತಿ ಗೌರವಾಧ್ಯಕ್ಷ ಕೇಶವ ಪ್ರಸಾದ್ ತೊಡಿಕಾನ ವೇದಿಕೆಯಲ್ಲಿದ್ದರು. ಪ್ರಧಾನ ಕಾರ್ಯದರ್ಶಿ ದೇವಪ್ಪ ಹೈದಂಗೂರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವಿವಿಧ ಸಮಿತಿಗಳ ಸಂಚಾಲಕರು , ಸಹಸಂಚಾಲಕರು , ಪದಾಧಿಕಾರಿಗಳು , ಆಡಳಿತ ಹಾಗೂ ಜೀರ್ಣೋದ್ಧಾರ ಸಮಿತಿ ಪ್ರಮುಖರು ಹಾಜರಿದ್ದರು.