ಬೆಳ್ಳಾರೆ ಸ್ನೇಹಿತರ ಕಲಾ ಸಂಘ ದ ಆಶ್ರಯದಲ್ಲಿ ಕುಣಿತ ಭಜನಾ ಪ್ರಾರಂಭೋತ್ಸವವು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಮೇ. 29 ರಂದು ಆರಂಭಗೊಂಡಿತು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಸಂಜಯ್ ನೆಟ್ಟಾರು ವಹಿಸಿದ್ದರು. ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ದೀಪ ಪ್ರಜ್ವಲಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ, ಜೇಸಿ ಪ್ರದೀಪ್ ಕುಮಾರ್ ರೈ ಪನ್ನೆ, ಭಜನಾ ತರಬೇತುದಾರ ಸದಾನಂದ ಆಚಾರ್ಯ, ಕಲಾ ಸಂಘದ ಕಾರ್ಯದರ್ಶಿ ವಸಂತ್ ಉಲ್ಲಾಸ್ ಪಡ್ಪು ಉಪಸ್ಥಿತರಿದ್ದು ಶುಭ ಹಾರೈಸಿದರು.
ಭಜನಾ ಶಿಬಿರಾರ್ಥಿಗಳು ಪ್ರಾರ್ಥಿಸಿದರು. ವಸಂತ್ ಉಲ್ಲಾಸ್ ಸ್ವಾಗತಿಸಿದರು. ಸಂಘದ ನಿಕಟ ಪೂರ್ವ ಅಧ್ಯಕ್ಷ ಶಿಕ್ಷಕ ಕೊರಗಪ್ಪ ರವರು ಕಾರ್ಯಕ್ರಮ ನಿರೂಪಿಸಿದರು. ಸ್ನೇಹಿತರ ಕಲಾ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಸಹಕರಿಸಿದರು.
ಕುಣಿತ ಭಜನಾ ತರಬೇತುದಾರ ಸದಾನಂದ ಆಚಾರ್ಯ ರವರು ತರಬೇತಿ ನೀಡಿದರು. ಸುಮಾರು 60 ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಭಾಗವಹಿಸಿದರು. ಪ್ರತಿ ಶನಿವಾರದಂದು ಮಧ್ಯಾಹ್ನ ನಂತರ ತರಬೇತಿ ನಡೆಯಲಿರುವುದಾಗಿ ಸಂಘಟಕರು ತಿಳಿಸಿದರು.