ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಸುಳ್ಯ ತಾಲೂಕು ಭಜನಾ ಪರಿಷತ್, ಭಜನೋತ್ಸವ ಸಮಿತಿ ವಳಲಂಬೆ ಇದರ ಸಂಯುಕ್ತ ಆಶ್ರಯದಲ್ಲಿ ಜೂ.26 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ತಾಲೂಕು ಮಟ್ಟದ ಭಜನೋತ್ಸವ ಕಾರ್ಯಕ್ರಮ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಮೇ.29 ರಂದು ವಳಲಂಬೆ ದೇವಳದ ಸಭಾಭವನದಲ್ಲಿ ನಡೆಯಿತು.
ಭಜನೋತ್ಸವ ಸಮಿತಿ ಅಧ್ಯಕ್ಷ ಕೇಶವ ಹೊಸೊಳಿಕೆ ಯವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಯೋಜನಾಧಿಕಾರಿ ನಾಗೇಶ್,ನಿವೃತ್ತ ಪ್ರಾಂಶುಪಾಲ ಬಾಬು ಮಾಸ್ತರ್ ಅಚ್ರಪ್ಪಾಡಿ,
ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ, ಗೌರವಾಧ್ಯಕ್ಷ ವಿಶ್ವನಾಥ ರೈ ಅರ್ಗುಡಿ, ದೇವಳದ ವ್ಯ.ಸ.ಸದಸ್ಯ ಲಿಂಗಪ್ಪ ನಾಯ್ಕ್, ಜನಜಾಗೃತಿ ವೇದಿಕೆಯ ಸದಸ್ಯ ವಿಜಯಕುಮಾರ್ ಚಾರ್ಮತ, ಭಜನೋತ್ಸವ ಸಮಿತಿ ಕಾರ್ಯದರ್ಶಿ ಮಾಧವ ಮೂಕಮಲೆ, ಒಕ್ಕೂಟದ ಅಧ್ಯಕ್ಷೆ ಕಲಾವತಿ ಮೊಟ್ಟೆಮನೆ ಯವರು ಉಪಸ್ಥಿತರಿದ್ದರು.
ಭಜನೋತ್ಸವ ಕಾರ್ಯಕ್ರಮದ ರೂಪು ರೇಷೆಯ ಕುರಿತು ಚರ್ಚಿಸಲಾಯಿತು. ಒಂದು ದಿನದ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ನಡೆಸುವುದೆಂದು ತೀರ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ವಿವಿಧ ಉಪ ಸಮಿತಿ ರಚಿಸಿ ಜವಬ್ದಾರಿ ಹಂಚಿಕೆ ಮಾಡಲಾಯಿತು. ಜೂ.5 ರಂದು ತಾಲೂಕಿನ ಭಜನಾ ಮಂಡಳಿಯ ಪದಾಧಿಕಾರಿಗಳ ಸಮ್ಮುಖದಲ್ಲಿ ಸುಳ್ಯ ಯೋಜನಾಧಿಕಾರಿ ಕಛೇರಿ ಸಭಾಭವನದಲ್ಲಿ ಸಭೆ ನಡೆಸುವುದಾಗಿ ನಿರ್ಣಯಿಸಲಾಯಿತು.
ಶ್ರೀಮತಿ ದಿವ್ಯ ಗುಡ್ಡೆಮನೆ ಪ್ರಾರ್ಥಿಸಿದರು. ವಲಯ ಮೇಲ್ವಿಚಾರಕ ಬಾಲಕೃಷ್ಣ ಕಾರ್ಯಕ್ರಮ ನಿರೂಪಿಸಿದರು.