ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಜೂ.5 ರಂದು ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿರುವುದು. ಬೆಳಗ್ಗೆ ನಿತ್ಯ ಪೂಜೆಯಾಗಿ ಬಳಿಕ ವಿಶೇಷವಾಗಿ ದೇವರಿಗೆ ಏಕದಶಾರುದ್ರಾಭಿಷೇಕ ಸೇವೆಯು ನಡೆಯಲಿದೆ. ಈ ಸಂದರ್ಭದಲ್ಲಿ ವೇದ ಪಾಠ ಶಾಲೆಯ ಸದಸ್ಯರಿಂದ ವೇದಪಾರಾಯಣ ನಡೆದು ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆ ಹಾಗೂ ಆಗಮಿಸಿದ ಭಕ್ತಾದಿಗಳಿಗೆ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಲಿರುವುದಾಗಿ ಸೇವಾ ಸಮಿತಿ ಅಧ್ಯಕ್ಷ ಪುರುಷೋತ್ತಮ ಕೋಲ್ಚಾರು ತಿಳುಸಿರುತ್ತಾರೆ.