2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ ತಿಂಗಳಲ್ಲಿ ನಡೆಯುವ ಪೂರಕ ಪರೀಕ್ಷೆಗೆ ಸಿದ್ಧತಾ ತರಗತಿಗಳು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ಸಂಸ್ಥೆಯಲ್ಲಿ ಆರಂಭಗೊಂಡಿದೆ. ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಇಲ್ಲಿ ಪ್ರತಿದಿನ ಶಾಲಾ ಮಾದರಿಯಲ್ಲಿ ಎಲ್ಲಾ ವಿಷಯಗಳಿಗೆ ವಿಶೇಷ ತರಗತಿ ನಡೆಸಲಾಗುವುದು ಎಂದು ಸಂಸ್ಥೆಯಲ್ಲಿ ಪ್ರಕಟನೆ ತಿಳಿಸಿದೆ.