ಕಾರ್ಮಿಕ ಇಲಾಖೆ, ಕಾರ್ಮಿಕರ ಕಲ್ಯಾಣ ಮಂಡಳಿ,ನಗರ ಪಂಚಾಯತ್ ಸುಳ್ಯ, ಯುವಜನ ಸಂಯುಕ್ತ ಮಂಡಳಿ ಸುಳ್ಯ, ಮತ್ತು ಜೇಸಿಐ ಸುಳ್ಯ ಸಿಟಿ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಯುವಜನ ಸಂಯುಕ್ತ ಮಂಡಳಿ ಸಭಾಭವನದಲ್ಲಿ ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಯಾನಂದ ಕೇರ್ಪಳ ವಹಿಸಿದ್ದರು.
ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಕಾರ್ಯಕ್ರಮ ಉದ್ಘಾಟಿಸಿದರು ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾ ಅಧಿಕಾರಿ ಭವಾನಿ ಶಂಕರ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ಎಚ್ ಎಲ್ ಎಲ್ ಜಿಲ್ಲಾ ಸಂಯೋಜಕರಾದ ಪಿ ವಿ ಸುಬ್ರಮಣಿ, ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ನಾಗರಾಜ್ ಉಪಸ್ಥಿತರಿದ್ದರು ಜೇಸಿಐ ಸುಳ್ಯ ಸಿಟಿ ಅಧ್ಯಕ್ಷ ಯುಪಿ ಬಶೀರ್ ಸ್ವಾಗತಿಸಿ ಸಂಜಯ್ ಬೆಳ್ಳಾರೆ ವಂದಿಸಿದರು ಜೇಸಿಐ ಸುಳ್ಯ ಸಿಟಿ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ್ ಕನಕಮಜಲು ಕಾರ್ಯಕ್ರಮ ನಿರೂಪಿಸಿದರು