ಜಾಲ್ಸೂರಿನ ವಿವೇಕಾನಂದ ವಿದ್ಯಾಸಂಸ್ಥೆಗಳು ವಿನೋಬಾನಗರ ಇಲ್ಲಿನ 2021-22 ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ 2022-23ನೇ ಸಾಲಿನ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ಮೇ 31ರಂದು ನಡೆಯಿತು.
ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಉಪಾಧ್ಯಕ್ಷರಾದ ಸತೀಶ್ ರಾವ್ ಮತ್ತು ಹವ್ಯಕ ಮಹಾಮಂಡಲ, ಶ್ರೀ ರಾಮಚಂದ್ರಾಪುರ ಮಠ ಇದೆ ಉಪಾಧ್ಯಕ್ಷೆ ಶ್ರೀಮತಿ ಕೆ.ಟಿ.ಶೈಲಜಾ ಭಟ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ವೇದಿಕೆಯಲ್ಲಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಉಪೇಂದ್ರ ಕಾಮತ್, ಶಾಲಾ ಸಂಚಾಲಕರಾದ ಸುಧಾಕರ ಕಾಮತ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಗೌರವ ಸಲಹೆಗಾರರಾದ ನ.ಸೀತಾರಾಮ, ಆಡಳಿತಾಧಿಕಾರಿ ಗೋಪಾಲ ರಾವ್, ಉಪಸ್ಥಿತರಿದ್ದರು.
ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗಿರೀಶ್ ಕುಮಾರ್ ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಜಯಪ್ರಕಾಶ್ ಕಾರಿಂಜ ವಂದಿಸಿದರು.