125 ಜನರಿಂದ ರಕ್ತದಾನ
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಮೇ.31. ರಂದು ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸಾ ಕೋಶ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ ರೇಂಜರ್ಸ್ ಘಟಕ ಇದರ ಆಶ್ರಯದಲ್ಲಿ ಹಾಗೂ ಇಂಡಿಯನ್ ರೆಡ್ ಕ್ರೋಸ್ ಸೋಸೈಟಿ , ಬ್ಲಡ್ ಬ್ಯಾಂಕ್ ಸರಕಾರಿ ಲೇಡಿಗೋಷನ್ ಆಸ್ಪತ್ರೆ ಮಂಗಳೂರು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ರೋಟರಿ ಕ್ಲಬ್ ಸುಬ್ರಮಣ್ಯ, ಜೆಸಿಐ ಸುಬ್ರಹ್ಮಣ್ಯ, ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ, ಪ್ರಾಕ್ತನ ವಿದ್ಯಾರ್ಥಿ ಸಂಘ, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಲೀಜನ್ ಸುಬ್ರಮಣ್ಯ ಇವರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು.
ಮಹಾವಿದ್ಯಾಲಯದ ಸಂಚಾಲಕರು ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಅಧ್ಯಕ್ಷತೆಯನ್ನು ವಹಿಸಿದ್ದರು. ಇಂಡಿಯನ್ ರೆಡ್ ಕ್ರಾಸ್ ಸೋಸೈಟಿ ದ.ಕ. ಜಿಲ್ಲಾ ಸಂಯೋಜಕರಾದ ಪ್ರವೀಣ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾದ , ನಿಟ್ಟೆ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಭಾನುಮತಿ, ರೋಟರಿ ಕ್ಲಬ್ ಸುಬ್ರಹ್ಮಣ್ಯದ ಅಧ್ಯಕ್ಷರಾದ ಗೋಪಾಲ್ ಎಣ್ಣೆ ಮಜಲು, ಕುಮಾರಸ್ವಾಮಿ ವಿದ್ಯಾಲಯದ ಸಂಚಾಲಕರಾದ ಚಂದ್ರಶೇಖರ್ ನಾಯರ್, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಲೀಜನ್ ಸುಬ್ರಹ್ಮಣ್ಯ ದ ಅಧ್ಯಕ್ಷರಾದ ವಿಶ್ವನಾಥ್ ನಡುತೋಟ, ಜೆ.ಸಿ.ಐ ಸುಬ್ರಹ್ಮಣ್ಯದ ಅಧ್ಯಕ್ಷರಾದ ದೀಪಕ್ ನಂಬಿಯಾರ್, ಪ್ರಾಕ್ತನ ವಿದ್ಯಾರ್ಥಿ ಸಂಘದ ಸದಸ್ಯರಾದ ದಿನೇಶ್ ಎಸ್ ಎನ್, ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ। ದಿನೇಶ್ ಪಿ ಟಿ., ಐಕ್ಯೂಎಸಿ ಸಂಯೋಜಕರಾದ ಡಾ। ಪ್ರಸಾದ ಎನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಗಳಾದ ಶ್ರೀಮತಿ ಆರತಿ ಕೆ. ಸ್ವಾಗತಿಸಿ, ಯುವ ರೆಡ್ ಕ್ರಾಸ್ ಘಟಕದ ಸಂಯೋಜಕಿ ಶ್ರೀಮತಿ ಕೃತಿಕಾ ಪಿಎಸ್ ಧನ್ಯವಾದ ಸಮರ್ಪಿಸಿದರು. ಸಂಧ್ಯಾ ಮತ್ತು ಬಳಗ ಪ್ರಾರ್ಥಿಸಿದರು. ತೃತೀಯ ಬಿಕಾಂ ವಿದ್ಯಾರ್ಥಿ ಹೇಮಂತ ಎಸ್ ಕಾರ್ಯಕ್ರಮ ನಿರೂಪಿಸಿದರು. 125ಜನ ರಕ್ತದಾನವನ್ನು ಕೈಗೊಂಡು 125 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಪ್ರಾಕ್ತನ ವಿದ್ಯಾರ್ಥಿ ಸಂಘದ ದಿನೇಶ್ ಎಸ್ ಎನ್ ರಕ್ತದಾನಿಗಳಿಗೆ ಪಾನೀಯ, ಹಣ್ಣು, ಐಸ್ ಕ್ರೀಮ್, ಇತ್ಯಾದಿಗಳನ್ನು ನೀಡಿ ಸಹಕರಿಸಿದರು.