Breaking News

ಶಾಂತಿನಗರ ಶಾಲೆಯಲ್ಲಿ ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಮಾರ್ಗದರ್ಶನದಲ್ಲಿ ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಯುನಿಸೆಪ್ ಸಹಯೊಗದೊಂದಿಗೆ ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜೂ. ೨೩ ರಂದು ಸುಳ್ಯ ಶಾಂತಿನಗರದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು.


ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ತುಳಸಿ ನಾಯ್ಕ್ ಅಧ್ಯಕ್ಷೀಯ ಭಾಷಣವನ್ನು ಮಾಡಿದರು. ಡಾ. ಪ್ರಮೋದ ಪಿ.ಎ., ಸಹ ಪ್ರಾಧ್ಯಾಪಕರು, ಮಕ್ಕಳ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕಾಧಿಕಾರಿ ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಸುಳ್ಯ ಇವರು ಚುಚ್ಚುಮದ್ದು, ಪೌಷ್ಟಿಕತೆ ಮತ್ತು ರಕ್ತಹೀನತೆ ಎಂಬ ವಿಷಯದ ಬಗ್ಗೆ ಮಾತನಾಡಿ ಮಕ್ಕಳಲ್ಲಿ ಜಾಗೃತಿ ಮೂಡಿಸಿದರು. ಈ ಶಿಬಿರದಲ್ಲಿ ಮಕ್ಕಳಲ್ಲಿ ರಕ್ತಹೀನತೆಯ ತಪಾಸಣೆಯನ್ನು ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಡಾ. ವಿಜಯಲಕ್ಷ್ಮಿ ಪಿ.ಬಿ., ಡಾ. ಪ್ರಮೋದ ಪಿ.ಎ., ಡಾ. ಸಂತೋಷ್ ನಾಯಕ್ ಕೆ.ಪಿ., ಡಾ. ಅಂಜು ಸುಭಾಷ್, ಕಿರಿಯ ವೈದ್ಯರುಗಳು, ಎನ್.ಎಸ್.ಎಸ್. ವಿದ್ಯಾರ್ಥಿಗಳು, ಮತ್ತು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶಾಂತಿನಗರ, ಸುಳ್ಯದ ವಿದ್ಯಾರ್ಥಿಗಳು ಹಾಗೂ ಬೋಧಕ-ಬೋಧಕೇತರ ವರ್ಗದವರು ಭಾಗವಹಿಸಿದರು. ಸುಮಾರು ೮೯ ವಿದ್ಯಾರ್ಥಿಗಳು ಈ ಶಿಬಿರದ ಪ್ರಯೋಜನವನ್ನು ಪಡೆದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.