ನಿನ್ನೆ ಬೆಳಿಗ್ಗೆ 7.45 ಕ್ಕೆ ಚೆಂಬು ಹಾಗೂ ಪೆರಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂರರಿಂದ ನಾಲ್ಕು ಸೆಕುಂಡುಗಳ ಕಾಲ ಭೂಕಂಪನವಾದ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿಯವರು, ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿಗಳು, ಕಂದಾಯ ಪರಿವೀಕ್ಷಕರು ಹಾಗೂ ಸಿಬ್ಬಂದಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರೊಂದಿಗೆ ಸಂವಹನ ನಡೆಸಿದ ಅಧಿಕಾರಿಗಳು ಭಯಬೀತರಾಗದಂತೆ ಎಚ್ಚರಿಕೆ ನೀಡಲಾಯಿತು.