Breaking News

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ ಅದ್ವಿತಿ 2022

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ವಾರ್ಶಿಕೋತ್ಸವ ಅದ್ವಿತಿ-2022, ಜೂ.25 ರಂದು ಕೆ.ವಿ.ಜಿ. ಸಮುದಾಯ ಭವನದಲ್ಲಿ ಬಹಳಷ್ಟು ವಿಜ್ರಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ತುಳುನಾಡ ನವರಸ ನಾಯಕ ಎಂದೇ ಖ್ಯಾತಿ ಪಡಿದಿರುವ ಭೋಜರಾಜ ವಾಮಂಜೂರ್‌ರವರು ಉಪಸ್ಥಿತರಿದ್ದರು. ಅವರು ವಿದ್ಯಾರ್ಥಿಗಳನ್ನುದೇಶಿಸಿ, ಕೇವಲ ಶೈಕ್ಷಣಿಕ ಅಷ್ಟೇ ಅಲ್ಲದೆ ಸಾಂಸ್ಕೃತಿಕವಾಗಿ ಧಾರ್ಮಿಕವಾಗಿ ಪ್ರಸಿದ್ಧಿ ಹೊಂದಿರುವ ಸುಳ್ಯದಂತಹ ಪ್ರದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ನೀವೇ ಅದೃಷ್ಟವಂತರು ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾಪ್ರಸಾದ್ ಕೆ.ವಿ. ಅವರು ನಮ್ಮ ವಿದ್ಯಾಸಂಸ್ಥೆ ಮತ್ತು ಇಲ್ಲಿನ ವಿದ್ಯಾರ್ಥಿಗಳು ಹಲವಾರು ಕ್ಷೇತ್ರದಲ್ಲಿ ತಮ್ಮದೇ ಆದಂತಹ ಸಾಧನೆಗಳನ್ನು ಮಾಡಿದ್ದಾರೆ ಇನ್ನು ಮುಂದೆಯೂ ಕೂಡ ಯಾವುದೇ ರೀತಿಯ ಕಾರ್ಯಚಟುವಟಿಕೆಗಳಿಗೆ ನಮ್ಮ ಸಂಪೂರ್ಣ ಸಹಕಾರವಿದೆ. ಎಂದು ಹೇಳಿದರು.


ಸಭೆಯಲ್ಲಿ ಕೆ.ವಿ.ಜಿ ಇ೦ಜಿನಿಯರಿ೦ಗ್ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರುಗಳಾದ ನಿತ್ಯಾನಂದ ಮುಂಡೋಡಿ, ಸೋಮಶೇಖರ ಕೊಂಗಾಜೆ, ಸಂತೋಷ್ ಜಾಕೆ, ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ., ಉಪಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ., ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ., ವಿ.ಟಿ.ಯು. ಸ್ಪೆಷಲ್ ಆಫೀಸರ್ ಡಾ. ಶಿವಕುಮಾರ್ ಹೆಚ್. ಆರ್. ಮತ್ತು ಡೀನ್ ಅಕಾಡೆಮಿಕ್ ಡಾ. ಉಮಾಶಂಕರ್ ಕೆ.ಎಸ್.ರವರು ಉಪಸ್ಥಿತರಿದ್ದರು.

ಇದೇ ಕಾರ್ಯಕ್ರಮದಲ್ಲಿ ಒಕ್ಕಲಿಗ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ರೇಣುಕಾಪ್ರಸಾದ್ ಕೆ.ವಿ.ಯವರನ್ನು ಕಾಲೇಜಿನ ಪರವಾಗಿ ಅಭಿನಂದಿಸಲಾಯಿತು. ಕೆ.ವಿ.ಜಿ.ಸಿ.ಇ. ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ. ಉಜ್ವಲ್ ಯು.ಜೆ.ಯವರನ್ನು ಕಾಲೇಜಿನ ವತಿಯಿಂದ ಡಾ. ರೇಣುಕಾಪ್ರಸಾದ್ ಕೆ.ವಿ.ಯವರು ಅಭಿನಂದಿಸಿದರು ಹಾಗೂ ಕೆ.ವಿ.ಜಿ. ಇಂಜಿನಿಯರಿಂಗ್ ಸಂಸ್ಥೆಯ ಚುಕ್ಕಾಣಿಯನ್ನು ಹಿಡಿದ ನೂತನ ಪ್ರಾಂಶುಪಾಲರಾದ ಡಾ. ಸುರೇಶ ವಿ. ಅವರನ್ನು ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು. ಜೊತೆಗೆ ಶೈಕ್ಷಣಿಕ ಸಾಧನೆಯನ್ನು ಮಾಡಿ ಪಿ.ಹೆಚ್.ಡಿ. ಪದವಿಯನ್ನು ಪಡೆದ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಕುಸುಮಾಧರ್ ಎಸ್. ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಪ್ರೊಫೆಸರ್‌ಗಳಾದ ಡಾ. ಸವಿತಾ ಎಂ. ಮತ್ತು ಡಾ. ಭಾಗ್ಯ ಹೆಚ್. ಕೆ., ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಪ್ರೊಫೆಸರ್‌ಗಳಾದ ಡಾ. ಪ್ರಜ್ಞಾ ಎಂ.ಆರ್, ಡಾ. ಸವಿತಾ ಸಿ.ಕೆ. ಮತ್ತು ಡಾ. ಸುರೇಖಾ ಎಂ. ವಿಭಾಗ ಮುಖ್ಯಸ್ಥರು, ಕೆಮಿಸ್ಟ್ರಿ ವಿಭಾಗ ಇವರುಗಳನ್ನು ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾಪ್ರಸಾದ್ ಕೆ.ವಿ.ಯವರು ಸನ್ಮಾನಿಸಿದರು.


ಅಂತಿಮ ವರ್ಷದ ವಿದ್ಯಾರ್ಥಿನಿಯರಾದ ಪ್ರಜ್ಞಾ ಮತ್ತು ಭಾಗ್ಯಲಕ್ಷ್ಮಿ ಪ್ರಾರ್ಥನೆಗೈದು, ಅಪ್ನನ್ ಅಹಮದ್ ಬಂದಂತಹ ಸರ್ವರನ್ನು ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ. ವಾರ್ಷಿಕ ವರದಿ ಮಂಡಿಸಿದರು. ಕುಮಾರಿ ಕಾವ್ಯಶ್ರೀ ಧನ್ಯವಾದಗೈದು. ಮಹಮ್ಮದ್ ಅಫ್ರಾಜ್ ಪಿ., ಕಾವ್ಯಶ್ರೀ ಟಿ., ಹೃತಿಕ್ಷ ಮತ್ತು ಧನ್ಯಾ ಪಿ. ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ವಿಕೆ ಜೋಡಿತಾರೆ ಬಳಗದಿಂದ ಸಂಗೀತ ರಸಮಂಜರಿ ಕಾರ್ಯಕ್ರಮಗಳು ನಡೆಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.