ಸುಳ್ಯ ತಾಲೂಕು ನಾಡಹಬ್ಬಗಳ ಸಮಿತಿ, ಗೌಡ ಯುವಸೇವಾ ಸಂಘ, ಸುಳ್ಯ ಇದರ ಆಶ್ರಯದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲು ಸುಳ್ಯ ಇವರ ಸಹಯೋಗದೊಂದಿಗೆ ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡ 513ನೇ ಜಯಂತಿಯನ್ನು ಜೂ.27 ರಂದು ಕೊಡಿಯಾಲಬೈಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಚರಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ತಾಲೂಕು ಕ.ಸಾ.ಪ ಅಧ್ಯಕ್ಷ ಚಂದ್ರಶೇಖರ ಪೇರಾಲು ಮಾತಾನಾಡಿದರು. ಸಭಾಧ್ಯಕ್ಷತೆಯನ್ನು ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರು ವಹಿಸಿದ್ದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ತಹಶೀಲ್ದಾರರವರಾದ ಕು.ಅನಿತಾ ಲಕ್ಷ್ಮೀ, ವೆಂಕಟ್ರಮಣ ಕ್ರೆಡಿಟ್ ಕೊ.ಅಪರೇಟಿವ್ ಅಧ್ಯಕ್ಷ ಪಿ.ಸಿ.ಜಯರಾಮ, ಕಾಲೇಜಿನ ಪ್ರಾಾಂಶುಪಾಲ ಸತೀಶ್ ಕೊಂಗಾಜೆ, ವೆಂಕಟ್ರಮಣ ಸೊಸೈಟಿ ಪೂರ್ವಾಧ್ಯಕ್ಷ ನಿತ್ಯಾನಂದ ಮುಂಡೋಡಿ ಹಾಗೂ ಸಂಘದ ಪ್ರಧಾನ ಕಾರ್ಯದರ್ಶಿ ಬೆಳ್ಯಪ್ಪ ಗೌಡ ಬಳ್ಳಡ್ಕ ಉಪಸ್ಥಿತರಿದ್ದರು. ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು. ಗೌಡರ ಯುವ ಸೇವಾಸಂಘದ ನಿರ್ದೇಶಕ ಪಿ.ಎಸ್.ಗಂಗಾಧರರವರು ಸ್ವಾಗತಿಸಿ, ನಿರ್ದೇಶಕ ದಿನೇಶ್ ಮಡಪ್ಪಾಡಿ ವಂದನಾರ್ಪಣೆ ಮಾಡಿದರು. ಕಾಲೇಜಿನ ಉಪನ್ಯಾಸಕ ಮನಮೋಹನ ಬಳ್ಳಡ್ಕ ಕಾರ್ಯಕ್ರಮ ನಿರೂಪಿಸಿದರು.