ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಜೂ. 30ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎ ಓ ಎಲ್ ಇ ಅಧ್ಯಕ್ಷ ಡಾ ಕೆ ಚಿದಾನಂದ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಸ್ತಿನ ಜೀವನ ಬಹಳ ಮುಖ್ಯ, ಜ್ಞಾನಕ್ಕಿಂತ ದೊಡ್ಡ ಆಸ್ತಿ ಬೇರೆ ಇಲ್ಲ. ಅದನ್ನು ಸಂಪಾದಿಸಬೇಕು.ವಿದ್ಯಾರ್ಥಿಗಳು ಕಲಿತ ವಿದ್ಯೆಯನ್ನು ಉತ್ತಮ ಕಾರ್ಯ ಸಾಧನೆಗಾಗಿ ಬಳಸಬೇಕು.ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಶಿಕ್ಷಕರ,ಹೆತ್ತವರ ಪಾತ್ರ ದೊಡ್ಡದು.ಸಂಸ್ಥಾಪಕರಾದ ಪೂಜ್ಯ ಕೆವಿಜಿ ಯವರ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆದು ಸಾಧನೆಗೈದ ವಿದ್ಯಾರ್ಥಿಗಳು ಇನ್ನಷ್ಟು ಸಾಧನೆಗೈಯುವಂತಾಗಲಿ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಎನ್ನೆ oಸಿಯ ಪ್ರಾoಶುಪಾಲರಾದ ಪ್ರೊ ರುದ್ರ ಕುಮಾರ್ ಎಂ ಎಂ ಉಪಸ್ಥಿತರಿದ್ದು ವಿದ್ಯಾರ್ಥಿಗಳ ಕಲಿಕಾ ಬೆಳವಣಿಗೆಯಲ್ಲಿ ಈ ಸಂಸ್ಥೆಯ ಪಾತ್ರ ದೊಡ್ಡದು,ದೊರಕಿರುವ ಅವಕಾಶಗಳನ್ನು ಬಳಸಿಕೊಂಡು ಸಾಧನೆಗೈದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗಳು ಸ್ಫೂರ್ತಿ ಪಡೆಯಿರಿ ಎಂದರು.ಪಿಯು ವಿಭಾಗದ ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ, ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ದಾಮೋದರ ಪಿ, ಸಾವಿತ್ರಿ ಕೆ,ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಧ್ಯಾನ್ ವಿಜಯ್,ಗೌತಮ್ ಪಿ,ದೀಕ್ಷಿತಾ ಆಚಾರ್,ಮಹಮ್ಮದ್ ಅನಾಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಭಾಧ್ಯಕ್ಷರಾದ ಡಾ.ಕೆ.ವಿ. ಚಿದಾನಂದ ಅವರು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಬ್ಯಾಡ್ಜ್ ಪ್ರಧಾನ ಮಾಡಿದರು.ವಿ.ಕ್ಷೇಮಾಧಿಕಾರಿ ಸಾವಿತ್ರಿ ಕೆ ಪ್ರತಿಜ್ಞಾ ವಿಧಿ ಬೋಧಿಸಿದರು.ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿಯಲ್ಲಿ 595ಅಂಕ ಗಳಿಸಿ ರಾಜ್ಯಕ್ಕೆ 4ನೇ ಸ್ಥಾನ ಗಳಿಸಿದ ವಿಜ್ಞಾನ ವಿಭಾಗದ ಸೌಮ್ಯ ಎಸ್ ಹಾಗೂ ವಿಜ್ಞಾನ ವಿಭಾಗದಲ್ಲಿ ತಾಲೂಕಿಗೆ ದ್ವಿತೀಯ ಸ್ಥಾನ ಗಳಿಸಿದ ವಿಖ್ಯಾತ್ ಮತ್ತು ಡಿಸ್ಟಿಂಕ್ಷನ್ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು.ಸಾಧಕರ ಪರವಾಗಿ ಸೌಮ್ಯ,ಮೇಘನಾ ಅನಿಸಿಕೆ ವ್ಯಕ್ತಪಡಿಸಿದರು.
ವಿದ್ಯಾರ್ಥಿನಿಯರಾದ ನಿಶ್ವಿತಾ,ಕೃತಿ ಜಿ ರಾವ್, ತೃಪ್ತಿ, ಅಚಲ ಪ್ರಾರ್ಥಿಸಿದರು.ವಿ ಕ್ಷೇಮಾಧಿಕಾರಿ ಸಾವಿತ್ರಿ ಕೆ ಸ್ವಾಗತಿಸಿದರು.ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ ಪ್ರಾಸ್ತಾವಿಕ ನುಡಿಗಳನ್ನಾಡಿದರು.ವಿದ್ಯಾರ್ಥಿನಿಯರಾದ ಅಭಿಜ್ಞಾ ಭಟ್, ಅಚಲಾ ಆರ್ ಎಸ್, ಅಂಬಿಕಾ,ಮೈತ್ರಿ ಆಶಯ ಗೀತೆ ಹಾಡಿದರು. ಉಪನ್ಯಾಸಕಿಯರಾದ ಕು. ಬೇಬಿ ವಿದ್ಯಾ ಪಿ.ಬಿ, ಶ್ರೀಮತಿ ರೇಖಾ ನಿರೂಪಿಸಿದರು.ವಿ. ಕ್ಷೇಮಾಧಿಕಾರಿ ದಾಮೋದರ ಪಿ ವಂದಿಸಿದರು.ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳ ಹೆತ್ತವರು, ಬೋಧಕ -ಬೋಧಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.