ಅಪಾರ ಪ್ರಮಾಣದಲ್ಲಿ ಬಾಳೆ ಕೃಷಿ ಧ್ವಂಸ
ಆಲೆಟ್ಟಿ ಭಾಗದ ಮೈಂದೂರು ಸೀತಾರಾಮ ಗೌಡರ ಕೃಷಿ ತೋಟಕ್ಕೆ ಕಳೆದ ರಾತ್ರಿ ಕಾಡಾನೆಗಳ ಹಿಂಡು ದಾಳಿ ನಡೆಸಿ ಬಾಳೆ ತೋಟವನ್ನು ಧ್ವಂಸಗೊಳಿಸಿದ ಘಟನೆ ವರದಿಯಾಗಿದೆ. ಸುಮಾರು 300 ಕ್ಕೂ ಹೆಚ್ಚು ಬಾಳೆಗಿಡಗಳನ್ನು ಪುಡಿ ಮಾಡಿರುವುದಲ್ಲದೆ ತೆಂಗಿನ ಮರ ಹಾಗೂ ಅಡಿಕೆ ಗಿಡಗಳನ್ನು ನಾಶಪಡಿಸಿವೆ. ಈ ಭಾಗದಲ್ಲಿ ನಿರಂತರ ಕಾಡಾನೆ ಹಾವಳಿಯಿಂದಾಗಿ ಕೃಷಿಕರು ಕಂಗೆಟ್ಟಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಮುತುವರ್ಜಿ ವಹಿಸಿ ಪರಿಹಾರದ ವ್ಯವಸ್ಥೆ ಮಾಡಬೇಕೆಂದು ಕೃಷಿ ಬೆಳೆಗಾರರು ಆಗ್ರಹ ವ್ಯಕ್ತ ಪಡಿಸಿದ್ದಾರೆ.