ಕುಟುಂಬ ಯೋಜನೆ ಕುರಿತು ಮಾಹಿತಿ ಕಾರ್ಯಕ್ರಮ
ಬಾಳಿಲ ಅಂಗನವಾಡಿ ಕೇಂದ್ರದಲ್ಲಿ ಜೂನ್ 30ರಂದು ವಿಶ್ವ ಜನಸಂಖ್ಯಾ ದಿನದ ಆಚರಣೆಯ ಅಂಗವಾಗಿ ಸಮುದಾಯ ಜಾಗೃತಿ ಕರಣ ಪಾಕ್ಷಿಕ ಆಚರಣೆ ಮತ್ತು ಕುಟುಂಬ ಯೋಜನೆ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.
ಭಾರತದ ಜನಸಂಖ್ಯೆಯನ್ನು ತಡೆಗಟ್ಟಲು 12 ವರ್ಷಗಳಿಂದ ದೇಶಾದ್ಯಂತ ಪ್ರತಿವರ್ಷ ಒಂದು ತಿಂಗಳ ಅಭಿಯಾನವನ್ನು ಆಚರಿಸಲು ನಿರ್ಧರಿಸಲಾಗಿದ್ದು ಅದರಂತೆ ಈ ಕುರಿತು ಅರ್ಹ ಫಲಾನುಭವಿಗಳಿಗೆ ತಾತ್ಕಾಲಿಕ ಮತ್ತು ಶಾಶ್ವತ ಕುಟುಂಬ ಯೋಜನೆ ಕುರಿತು ಮಾಹಿತಿ ನೀಡಲಾಗುತಿದೆ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಮಾಹಿತಿ ನೀಡಿದರು.
ಅರ್ಹರು ಕುಟುಂಬ ಯೋಜನಾ ಸೇವೆಗಳನ್ನು ಪಡೆದುಕೊಂಡು ಕುಟುಂಬ ಹಾಗೂ ದೇಶದ ಅಭಿವೃದ್ಧಿಗೆ ಸಹಕರಿಸಬೇಕೆಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಳಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ತ್ರಿವೇಣಿ ವಹಿಸಿ ಮಾತನಾಡಿ
ಕುಟುಂಬ ಯೋಜನಾ ವಿಧಾನಗಳನ್ನು ಅಳವಡಿಸಿಕೊಂಡು, ಆರೋಗ್ಯ ಮತ್ತು ಕುಟುಂಬದ ಅಭಿವೃದ್ಧಿಗೆ ಸಹಕರಿಸೋಣ ಎಂದು ಹೇಳಿದರು.
ವೇದಿಕೆಯಲ್ಲಿ ಪ್ರಾಥಮಿಕ ಸುರಕ್ಷಾಧಿಕಾರಿ ರೇಖಾ, ಸಮುದಾಯ ಆರೋಗ್ಯ ಸುರಕ್ಷಾಧಿಕಾರಿ ಅಕ್ಷತಾ, ಅಂಗನವಾಡಿ ಕಾರ್ಯಕರ್ತೆ ದಯಾನಂದನಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸ್ತ್ರೀಶಕ್ತಿ ಸಂಘದ ಸದಸ್ಯರು, ತಾಯಂದಿರು, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಸಮುದಾಯ ಆರೋಗ್ಯ ಸುರಕ್ಷಾಧಿಕಾರಿ ಅಕ್ಷತಾ ಸ್ವಾಗತಿಸಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ರೇಖಾ ವಂದಿಸಿದರು.