ಆ. 5: ಬೆಳ್ಳಾರೆಯಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

0

 

ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಬೆಳ್ಳಾರೆ ಇದರ ಆಡಳಿತಕ್ಕೆ ಒಳಪಟ್ಟ ಶ್ರೀ ಸದಾಶಿವ ಶಿಶುಮಂದಿರದ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ಆ. 5ರಂದು ಬೆಳಿಗ್ಗೆ 8.00 ಗಂಟೆಯಿಂದ ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 8.00 ಗಂಟೆಗೆ ಕಲಶ ಸ್ಥಾಪನೆ ಬಳಿಕ ಪಾರಾಯಣ, ಕುಂಕುಮಾರ್ಚನೆ, 11.30ಕ್ಕೆ ಮಹಾಪೂಜೆ, ಮಂಗಳಾರತಿ ನಡೆಯಲಿದೆ. ವಿಶೇಷ ಆಕರ್ಷಣೆಯಾಗಿ ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇವರಿಂದ ಚೆಂಡೆ ವಾದನ ಸೇವಾ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ಸದಾಶಿವ ಚಾರಿಟೇಬಲ್ ಸೊಸೈಟಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ, ಕಾರ್ಯದರ್ಶಿ ಶ್ರೀರಾಮ ಪಾಟಾಜೆ ಮತ್ತು ಕೋಶಾಧಿಕಾರಿ ರಾಜಾರಾಂ ಕಾವಿನಮೂಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.