ಶಾಂತಿನಗರ  ಶಾಲೆಯಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಂಗವಾಗಿ 75 ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ

0
124

 

p>

75 ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ, ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶಾಂತಿನಗರದ ಆವರಣದಲ್ಲಿ ಶ್ರಮದಾನ ಹಾಗೂ 75 ಗಿಡ ನೆಡುವ ವಿಶೇಷ ಕಾರ್ಯಕ್ರಮಕ್ಕೆ ಜುಲೈ 30ರಂದು ಚಾಲನೆ ನೀಡಲಾಯಿತು.

 

ವಜ್ರಮಹೋತ್ಸವದ ಪ್ರಯುಕ್ತ ಒಟ್ಟು 75 ಉತ್ಕೃಷ್ಟ ಮಟ್ಟದ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಶ್ರಮದಾನ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ‘ಶೌರ್ಯ ವಿಪತ್ತು ನಿರ್ವಹಣಾ ಘಟಕ’ ಸುಳ್ಯ ವಲಯ ನೆರವೇರಿಸಿದರು. ಸಸಿ ನೆಡುವ ಕಾರ್ಯಕ್ರಮನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನಝೀರ್ ಶಾಂತಿನಗರ ನೆರವೇರಿಸಿದರು. ಈ ಸಂಧರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ತುಳಸಿ, ‘ವಿಪತ್ತು ನಿರ್ವಹಣಾ ಘಟಕ’ ಸುಳ್ಯ ವಲಯ ಇದರ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಊರಿನ ಹಿರಿಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here