75 ನೇ ಸ್ವಾತಂತ್ಯ್ರ ಸುವರ್ಣ ಮಹೋತ್ಸವದ ಅಂಗವಾಗಿ ರಾಣಿ ಅಬ್ಬಕ್ಕ ಕುರಿತು ಸಾಕ್ಷ್ಯಚಿತ್ರ ಪ್ರದರ್ಶನ

0
54

ನೆಹರು ಮೆಮೋರಿಯಲ್ ಕಾಲೇಜು, ಇದರ ಆಂತರಿಕ ಗುಣಮಟ್ಟ ಖಾತರಿಕೋಶದ ನೇತೃತ್ವದಲ್ಲಿ ೭೫ನೇ ಸ್ವಾತಂತ್ಯ್ರ ಸುವರ್ಣ ಮಹೋತ್ಸವದ ಅಂಗವಾಗಿ ರಾಣಿ ಅಬ್ಬಕ್ಕ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ಆಯೋಜಿಸಲಾಗಿತ್ತು.

p>

ಈ ಸಾಕ್ಷ್ಯಚಿತ್ರವನ್ನು ರಚಿಸಿ, ನಿರ್ದೇಶಿಸಿರುವ ತೀಯ ಚಟರ್ಜಿ, ನವದೆಹಲಿ ಇವರು ಈ ಪ್ರದರ್ಶನದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ.ಎಂ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಎಂ. ಉಪಸ್ಥಿತರಿದ್ದರು. ವೇದಿಕೆಯಲ್ಲಿ ಡಾ. ಚಂದ್ರಶೇಖರ ಭಟ್ ದಾಮ್ಲೆ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯವರಾದ ಶ್ರೀಮತಿ ರತ್ನಾವತಿ ಡಿ. ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಆಂತರಿಕ ಗುಣಮಟ್ಟ ಖಾತರಿಕೋಶದ ಸಂಯೋಜಕಿ ಶ್ರೀಮತಿ ಮಮತಾ ಕೆ. ಕಾರ್‍ಯಕ್ರಮವನ್ನು ನಿರೂಪಿಸಿದರು. ಆಂತರಿಕ ಗುಣಮಟ್ಟ ಖಾತರಿಕೋಶದ ಸದಸ್ಯರು ಸಹಕರಿಸಿದರು. ಕಾಲೇಜಿನ ಬೋಧಕ, ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here