ಕಲ್ಮಕಾರಿಗೆ ಕೂಡಲೇ ಎನ್.ಡಿ.ಆರ್.ಎಫ್. ತಂಡ ರವಾನೆ

0

 

 

ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿಕೆ

ದ.ಕ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅದರಲ್ಲೂ ಸುಬ್ರಹ್ಮಣ್ಯ, ಕಲ್ಮಕಾರು, ಕೊಲ್ಲಮೊಗ್ರು, ಹರಿಹರ, ಬಾಳುಗೋಡು ಆಸುಪಾಸಿನ ಕಡೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು,
ಈ ಭಾಗದಲ್ಲಿ ಮುಂಜಾಗ್ರತಾ ಕ್ರಮ ವಹಿಸಲು ಎಸ್.ಡಿ.ಆರ್.ಎಫ್. ಹಾಗೂ ಎನ್.ಡಿ.ಆರ್.ಎಫ್. ತಂಡವನ್ನು ಆ ಭಾಗಕ್ಕೆ ಕಳುಹಿಸಿಕೊಡಲಾಗುತ್ತಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.


ಸಂಬಂಧಿಸಿದ ಅಧಿಕಾರಿಗಳಿಗೂ ಕಟ್ಟೆಚ್ಚರ ವಹಿಸಿ ಮುಂಜಾಗ್ರತೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ನೆರೆ ಸಂದರ್ಭ ಸಾರ್ವಜನಿಕರು ಸಹಕರಿಸಿ, ಸುರಕ್ಷತೆ ಕಡೆ ಹೆಚ್ಚಿನ ಗಮನಹರಿಸಬೇಕು.
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರು ಒಂದೆರಡು ದಿನಗಳು ಕಾದು ಮಳೆ ಕಡಿಮೆಯಾದ ಬಳಿಕ ಕ್ಷೇತ್ರ ಸಂದರ್ಶಿಸ ಬೇಕು ಎಂದು ಸಚಿವರು ವಿನಂತಿಸಿದ್ದಾರೆ.