ಸುಬ್ರಹ್ಮಣ್ಯದಲ್ಲಿ ಭಾರೀ ದುರಂತ

0
2399

ಕುಮಾರಧಾರದಲ್ಲಿ ಗುಡ್ಡ ಜರಿದು ಮನೆ ಕುಸಿತ

p>

ಇಬ್ಬರು ಮಕ್ಕಳು ಬಲಿ

ಸುಬ್ರಹ್ಮಣ್ಯ ಪರಿಸರದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಇಂದು ಭಾರಿ ಅನಾಹುತ ಸಂಭವಿಸಿದೆ.
ಸುಬ್ರಹ್ಮಣ್ಯದ ಕುಮಾರಧಾರ ಬಳಿಯಲ್ಲಿ ಗುಡ್ಡ ಜರಿದು ಮನೆಯೊಂದು ಕುಸಿದು ಬಿದ್ದಿದ್ದು ಮನೆಯೊಳಗಿನ ಇಬ್ಬರು ಮಕ್ಕಳು ಮಣ್ಣಲ್ಲಿ ಹೂತು ಹೋಗಿದ್ದಾರೆ. ಕುಸುಮಾಧರ ಎಂಬವರ ಮನೆ ಕುಸಿತಗೊಂಡಿದ್ದು ಅವರ ಇಬ್ಬರು ಹೆಣ್ಣುಮಕ್ಕಳು ಮಣ್ಣುಪಾಲಾಗಿದ್ದಾರೆ. ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಜೇಸಿಬಿ ತರಿಸಲಾಗಿದೆ. ಮೃತದೇಹಗಳನ್ನು ಹೊರತೆಗೆಯುವ ಪ್ರಯತ್ನ ನಡೆಸಲಾಗಿದೆ. ಆದರೆ ಕುಮಾರಧಾರೆಯಿಂದ ಪಂಜ ಕಡೆಗೆ ಹೋಗುವ ರಸ್ತೆ ನೆರೆ ನೆರೆನೀರಲ್ಲಿ ಪೂರ್ಣ ಮುಳುಗಿರುವುದರಿಂದ ಮತ್ತು ಮರ ಕೂಡ ಬಿದ್ದಿರುವುದರಿಂದ ರಸ್ತೆ ಬಂದ್ ಆಗಿದ್ದು ಪರಿಹಾರ ಕಾರ್ಯಕ್ಕೆ ತೊಂದರೆ ಉಂಟಾಗಿದೆ.

LEAVE A REPLY

Please enter your comment!
Please enter your name here