ಕುಕ್ಕೆ ಸುಬ್ರಹ್ಮಣ್ಯದಲ್ಲಿ ದುರಂತ

0

ಮಣ್ಣಿನಡಿ ಸಿಲುಕಿದ ಮಕ್ಕಳ ಮೃತ ದೇಹ ಪತ್ತೆ

ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಇಂದು ಭಾರಿ ಅನಾಹುತ ಸಂಭವಿಸಿದ್ದು, ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದೆ.

ಸುಬ್ರಹ್ಮಣ್ಯದ ಕುಮಾರಧಾರ ಬಳಿಯಲ್ಲಿ ಗುಡ್ಡ ಜರಿದು ಮನೆಯೊಂದು ಕುಸಿದು ಬಿದ್ದಿದ್ದು ಮನೆಯೊಳಗಿನ ಇಬ್ಬರು ಮಕ್ಕಳು ಮಣ್ಣಲ್ಲಿ ಹೂತು ಹೋಗಿದ್ದರು.

ಮೂಲತಹ ಪಂಜದ ಕುಸುಮಾಧರ ಕರಿಮಜಲು ಎಂಬವರ ಮನೆ ಕುಮಾರಧಾರ ಸಮೀಪದಲ್ಲಿದ್ದು , ಮನೆ ಕುಸಿತಗೊಂಡಿದ್ದು ಅವರ ಇಬ್ಬರು ಹೆಣ್ಣುಮಕ್ಕಳು ಮಣ್ಣುಪಾಲಾಗಿದ್ದರು.

ಜೆಸಿಬಿ ತರಿಸಿ ಮಕ್ಕಳನ್ನು ಹೊರತೆಗೆಯಲಾಗಿದ್ದು ಈ ವೇಳೆ ಇಬ್ಬರೂ ಮೃತಪಟ್ಟಿದ್ದರು.

11 ವರ್ಷದ ಶ್ರುತಿ ಮತ್ತು 8 ವರ್ಷದ ಗಾನಶ್ರೀ ಮೃತಪಟ್ಟ ಮಕ್ಕಳು