ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇನ್ನೆರಡು ಆರೋಪಿಗಳ ಬಂಧನ

0

 

 

ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಪೊಲೀಸರು ಇನ್ನೆರಡು ಆರೋಪಿಗಳನ್ನು ಆ.2 ರಂದು ಬಂಧಿಸಿದ್ದಾರೆ. ಬೆಳ್ಳಾರೆ ಪಲ್ಲಿಮಜಲು ನಿವಾಸಿಗಳಾದ ಸದ್ದಾಂ(32ವ) ಹಾರಿಸ್(42ವ) ರವರು ಬಂಧಿತ ಆರೋಪಿಗಳು.

ಈ ಪ್ರಕರಣದಲ್ಲಿ ಈಗಾಗಲೇ ಇಬ್ಬರು ಆರೋಪಿಗಳಾದ ಶಫೀಕ್ ಮತ್ತು ಜಾಕೀರ್ ಅವರನ್ನು ಜು.28 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ ಬಳಿಕ ಪೊಲೀಸರು ಆರೋಪಿಗಳ ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ಕೇಳಿಕೊಂಡಂತೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನ್ಯಾಯಾಲಯ ನೀಡಿತ್ತು. ಬಳಿಕ ತನಿಖೆಯನ್ನು ಮುಂದುವರಿಸಿದ ಪೊಲೀಸರು ಹೆಚ್ಚಿನ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಸದ್ದಾಂ ಮತ್ತು ಹಾರಿಸ್ ಅನ್ನು ಬಂಧಿಸಿದ್ದಾರೆ. ಇದುವರೆಗೆ ನಡೆಸಲಾದ ತನಿಖೆಯ ಆಧಾರದ ಮೇಲೆ, ತನಿಖಾ ತಂಡವು ಈ ಪ್ರಕರಣದಲ್ಲಿ ಶಂಕಿತ ಸಂಚುಕೋರರು ಮತ್ತು ಹಲ್ಲೆಕೋರರನ್ನು ಗುರುತಿಸಿ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ನಡೆಯುತ್ತಿದೆ ಎಂದು ದ. ಕ. ಜಿಲ್ಲಾ ಎಸ್. ಪಿ. ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.