ಐವರ್ನಾಡು:  ಆದಂರಿಗೆ ಅಕ್ರಮ ಸಕ್ರಮದಡಿಯಲ್ಲಿ ಜಾಗ ಮಂಜೂರು ಮಾಡಿಕೊಡಲು ಮತ್ತು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಬಾಲಕನ ಕುಟುಂಬಕ್ಕೆ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗೆ ಮನವಿ

0
229

ಐವರ್ನಾಡಿನ  ಆದಂರಿಗೆ ಅಕ್ರಮ ಸಕ್ರಮದಡಿಯಲ್ಲಿ ಜಾಗ ಮಂಜೂರು ಮಾಡಿಕೊಡಲು ಮತ್ತು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಬಾಲಕನ ಕುಟುಂಬಕ್ಕೆ ಪರಿಹಾರ ನೀಡುವಂತೆ ಸುಳ್ಯ ತಾಲೂಕು ಮುಸ್ಲಿಂ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಮಾಡಲಾಯಿತು.

p>

ಐವರ್ನಾಡು ಗ್ರಾಮದಲ್ಲಿ ಕಳೆದ 40 ವರ್ಷಗಳಿಂದ ತಮ್ಮ ಜಾಗದಲ್ಲಿ ವಾಸಿಸುತ್ತಿರುವ ಆದಮ್ ಎಂಬುವರಿಗೆ ಅಕ್ರಮ ಸಕ್ರಮದಡಿಯಲ್ಲಿ ಅವರ ಹೆಸರಿಗೆ ಜಾಗ ಮಂಜೂರು ಮಾಡಿಕೊಡುವಂತೆ ಮತ್ತು ಅದೇ ಮನೆಯಲ್ಲಿ ಪ್ರಿಡ್ಜ್ ನಿಂದ ಶಾಕ್ ಹೊಡೆದು ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡುವಂತೆ ಆಗ್ರಹಿಸಿ ಸುಳ್ಯ ತಾಲೂಕು ಮುಸ್ಲಿಂ ಒಕ್ಕೂಟದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಇಂದು ಮನವಿಯನ್ನು ಸಲ್ಲಿಸಲಾಯಿತು.

ಮನವಿ ಸ್ವೀಕರಿಸಿರುವ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಮುಸ್ಲಿಂ ಒಕ್ಕೂಟದ ಸಂಚಾಲಕ ಇಕ್ಬಾಲ್ ಎಲಿಮಲೆ, ಪದಾಧಿಕಾರಿಗಳಾದ ಹಾಜಿ ಕೆ ಎಂ ಮುಸ್ತಫ ಜನತಾ, ಹಾಜಿ ಇಬ್ರಾಹಿಂ ಕತ್ತರ್ ಮಂಡೆಕೋಲು, ಕೆ ಎಸ್ ಉಮ್ಮರ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here