ಸುಳ್ಯದ ಸೈಂಟ್ ಜೋಸೆಪ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

0
222

 

p>

ಸುಳ್ಯದ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಪೋಷಕರ ಸಮಿತಿಯ ಪ್ರತಿನಿಧಿಗಳ ಸಭೆಯು ಜು. 29 ರಂದು ನಡೆಯಿತು.

ಸಭಾಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಸಂಚಾಲಕರಾದ ರೇ. ಫಾ. ವಿಕ್ಟರ್ ಡಿಸೋಜ ವಹಿಸಿ , ವಿದ್ಯಾಸಂಸ್ಥೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮಗಳ ಬಗ್ಗೆ ಮತ್ತು ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟದ ಸಂಘಟನೆಯ ಬಗ್ಗೆಯೂ ಚರ್ಚಿಸಲಾಯಿತು.

ವೇದಿಕೆಯಲ್ಲಿ ಪ್ರೌಢಶಾಲಾ ಪೋಷಕ ಸಮಿತಿಯ ಅಧ್ಯಕ್ಷರಾದ ಹರೀಶ್ ರಾವ್ ಕಣಪ್ಪಿಲ, ಪ್ರಾಥಮಿಕ ಶಾಲೆ ಪೋಷಕ ಸಮಿತಿಯ ಅಧ್ಯಕ್ಷರಾದ ದುರ್ಗಾ ಪ್ರಸಾದ್, ಪೂರ್ವ ಪ್ರಾಥಮಿಕ ಪೋಷಕ ಸಮಿತಿಯ ಅಧ್ಯಕ್ಷೆ ಡಾ. ಅನುರಾಧ ಕುರುಂಜಿ , ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಸ್ಟೆಲ್ಲಾ ಉಪಸ್ಥಿತರಿದ್ದರು. ಪೋಷಕ ಸಮಿತಿಯ ಪ್ರತಿನಿಧಿಗಳು ಕಾರ್ಯಕ್ರಮಗಳ ಯಶಸ್ವಿಯ ಬಗ್ಗೆ ಉತ್ತಮ ಸಲಹೆ ಸೂಚನೆಗಳನ್ನು ನೀಡಿದರು. ಪ್ರೌಢಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಚೇತನ ಸ್ವಾಗತಿಸಿ, ಪ್ರಾಥಮಿಕ ಶಾಲಾ ಶಿಕ್ಷಕರ ಕಾರ್ಯದರ್ಶಿ ಮಮತಾ ವಂದಿಸಿದರು.

LEAVE A REPLY

Please enter your comment!
Please enter your name here