ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಂದ ಗೃಹ ಸಚಿವ ಅಮಿತ್ ಶಾ ಭೇಟಿ

0

 

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಆ.2 ರಂದು ಸಂಸತ್ತಿನಲ್ಲಿ ಭೇಟಿ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಕೇಸನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದುದಕ್ಕಾಗಿ ಧನ್ಯವಾದ ಹೇಳಿದರು.

ಈ ಸಂದರ್ಭದಲ್ಲಿ ಕೇರಳದ ಗಡಿಪ್ರದೇಶವಾದ ಕರಾವಳಿ ಪ್ರದೇಶಗಳಲ್ಲಿ ರಾಷ್ಟ್ರ ವಿರೋಧಿ ಚಟುವಟಿಕೆಗಳು ಹೆಚ್ಚಾಗಿದ್ದು, ಇವುಗಳ ಮೇಲೆ ವಿಶೇಷ ನಿಗಾ ವಹಿಸಲು ಬೆಂಗಳೂರಿನ ರಾಷ್ಟ್ರೀಯ ತನಿಖಾ ದಳದ ಕಚೇರಿಯನ್ನು ಬಲಪಡಿಸುವಂತೆ ಕೋರಿದರು.