ಸುಬ್ರಹ್ಮಣ್ಯದಲ್ಲಿ ದುರಂತ ಸಂಭವಿಸಿ ಮಕ್ಕಳು ಮೃತಪಟ್ಟ ಮನೆಗೆ ಉಸ್ತುವಾರಿ ಸಚಿವರ ಭೇಟಿ

0

 

 

ಜಿಲ್ಲಾಧಿಕಾರಿ, ತಹಶೀಲ್ದಾರ್, ಅಧಿಕಾರಿಗಳ ಉಪಸ್ಥಿತಿ

ಅಂಗಡಿಗಳಿಗೆ ನೀರು ನುಗ್ಗಿ ಹಾನಿಯಾಗಿದ್ದರೆ ವಿಶೇಷ ಪ್ಯಾಕೇಜ್  ಘೋಷಣೆ : ಸುನಿಲ್‌ ಕುಮಾರ್

ಸುಬ್ರಹ್ಮಣ್ಯದಲ್ಲಿ ದರಂತ ಸಂಭವಿಸಿ ಮೃತಪಟ್ಟ ಮಕ್ಕಳ ಮನೆಗೆ ಉಸ್ತುವಾರಿ ಸಚಿವ ಸುನಿಲ್  ರವರು ಇಂದು ಭೇಟಿ ನೀಡಿದರು.

 

ಮನೆಗಾಗಿ 95 ಸಾವಿರ ನೀಡಿದ್ದೇವೆ. ಇನ್ನು ಮನೆ ಕಟ್ಟುವುದಿದ್ರೆ 4 ಲಕ್ಷ ಕೊಡಲಾಗುವುದು, ಅಂಗಡಿಗಳಿಗೆ ನೀರು ನುಗ್ಗಿ ಹಾನಿ ಯಾಗಿದ್ರೆ ಹಣ ಕೊಡುವ ಪ್ರಾವಿಶನ್ ಇಲ್ಲ, ಆದ್ರೂ ಮುಖ್ಯ ಮಂತ್ರಿಗಳ ಗಮನಕ್ಕೆ ತಂದು ವಿಶೇಷ ಪ್ಯಾಕೇಜ್ ಘೋಷಣೆ ನೀಡಿ ಅಂಗಡಿಗಳಿಗೂ ಪರಿಹಾರ ನೀಡಲಿದ್ದೇವೆ ಎಂದು ಸುನಿಲ್‌ ಕುಮಾರ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಎ ಸಿ ಗಿರೀಶ್ ನಂದನ್, ಜಿ.ಪಂ ಸಿ ಇ ಒ ಕುಮಾರ್ , ಬಿಜೆಪಿಯ ಸುದರ್ಶನ್ ಮೂಡಬಿದ್ರೆ,
ಸುಳ್ಯ ತಹಶಿಲ್ದಾರ್ ಅನಿತಾ ಲಕ್ಷ್ಮೀ, ಕಡಬ ತಹಶಿಲ್ದಾರ್ ಅನಂತ ಶಂಕರ, ಪುತ್ತೂರು ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ,
ಎ ಸಿ ಎಫ್ ಪ್ರವೀಣ್ ಶೆಟ್ಟಿ, ಉಪವಲಯಾರಣ್ಯಧಿಕಾರಿ ಮಂಜುನಾಥ, ಕೊರಗಪ್ಪ ಹೆಗಡೆ,ಆರ್ ಐ ಅವಿನ್ ರಂಗತ್ ಮಲೆ, ಪಂಜ ಸೊಸೈಟಿ ಅಧ್ಯಕ್ಷ ಸುಬ್ರಹ್ಮಣ್ಯ ಕುಳ, ಸುಬ್ರಹ್ಮಣ್ಯ ಮೆಸ್ಕಾಂ ಸಹಾಯಕ ಅಭಿಯಂತರ ಚಿದಾನಂದ, ಪಂಜ ಮೆಸ್ಕಾಂ ಹರಿವೆಂಕಟೇಶ ಶರ್ಮ,
ಪಂಜ ಗ್ರಾ.ಪಂ. ಅಧ್ಯಕ್ಷೆ ಪೂರ್ಣಿಮಾ ದೇರಾಜೆ, ಸದಸ್ಯರಾದ ನಾರಾಯಣ ಕೃಷ್ಣನಗರ, ಚಂದ್ರಶೇಖರ ದೇರಾಜೆ, ಲಿಖಿತ್ ಪಲ್ಲೋಡಿ, ಜಗದೀಶ್ ಪುರಿಯ ಮತ್ತಿತರರು ಉಪಸ್ಥಿತರಿದ್ದರು.