ಐವರ್ನಾಡು ಗ್ರಾಮ ಪಂಚಾಯತ್ :  ಚದುರಂಗ ಆಟ ಆಡೋಣ ಅಭಿಯಾನ

0
141

 

p>

ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಕೀಲಾಡಿಯವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಗ್ರಂಥಾಲಯದ ಓದುವ ಬೆಳಕು ಕಾರ್ಯಕ್ರಮದ ಅಡಿಯಲ್ಲಿ ಗ್ರಾಮ ಚದುರಂಗ ಆಟ ಆಡೋಣ ಅಭಿಯಾನ ಸ್ಪರ್ಧಾ ಕಾರ್ಯಕ್ರಮವನ್ನು ಜು.03 ರಂದು ನಡೆಸಲಾಯಿತು .


ಈ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿಯವರು ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ 16 ವಿದ್ಯಾರ್ಥಿಗಳು ಭಾಗವಹಿಸಿದ್ದರು .ಯಕ್ಷಿತಾ .ಬಿ.ಎನ್ ಪ್ರಥಮ ಹಾಗೂ ಗಗನ್ ಆರ್ .ಸಿ ದ್ವಿತೀಯ ಸ್ಥಾನವನ್ನು ಪಡೆದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸಮದಾನಕರ ಬಹುಮಾನವನ್ನು ವಿತರಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಐವರ್ನಾಡು ಸ.ಹಿ.ಪ್ರಾ.ಶಾಲಾ ಶಿಕ್ಷಕಿ ಮಾಲತಿಯವರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಸಯತ್ ಉಪಾಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರು ಭಾಗವಸಿದ್ದರು. ಅಭಿವೃದ್ದಿ ಅಧಿಕಾರಿಯವರು ಸ್ವಾಗತಿಸಿ,ವಂದಿಸಿದರು.

LEAVE A REPLY

Please enter your comment!
Please enter your name here