ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಗಂಭೀರವಾಗಿ ಪರಿಗಣಿಸಲು ಎನ್.ಐ.ಎ. ಗೆ ಸೂಚಿಸುವೆ

0

 

 

ಕೇಂದ್ರ ಗೃಹ ಸಚಿವ ಅಮಿತ್ ಷಾರಿಂದ ಸಂಸದ ನಳಿನ್ ರಿಗೆ ಭರವಸೆ

 

ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಕೇಂದ್ರ ಗೃಹ ಸಚಿವ ಅಮಿತ್ ಷಾ ರವರನ್ನು ಆ.3 ರಂದು ನವದೆಹಲಿಯಲ್ಲಿ ಭೇಟಿ ಮಾಡಿದರು. ಕೆಲ ದಿನಗಳ ಹಿಂದೆ ಬೆಳ್ಳಾರೆಯಲ್ಲಿ ನಡೆದಿರುವ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್ ಐ ಎ ವಹಿಸಿಕೊಂಡಿರುವುದಕ್ಕೆ ಧನ್ಯವಾದ ಸಮರ್ಪಿಸಿ, ಈ ಪ್ರಕರಣದ ತನಿಖೆಯಲ್ಲಿ ವಿಶೇಷ ಕಾಳಜಿ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ಗೃಹ ಸಚಿವ ಅಮಿತ್ ಷಾರವರು ರಾಜ್ಯದಲ್ಲಿ ಎನ್ ಐ ಎ ಯನ್ನು ಬಲಗೊಳಿಸುವುದರೊಂದಿಗೆ ಎನ್ ಐ ಎ ಗೆ ವಹಿಸಿರುವ ಪ್ರಕರಣಗಳ ತನಿಖೆಯನ್ನು ಶೀಘ್ರವಾಗಿ ಕೈಗೊಂಡು ಅಪರಾಧ ಕೃತ್ಯ ಎಸಗುವವರಿಗೆ ಕಠಿಣ ಸಂದೇಶವನ್ನು ನೀಡಲಾಗುವುದು ಮತ್ತು ಎನ್ ಐ ಎ ಅಧಿಕಾರಿಗಳಿಗೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸುವುದಾಗಿ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ.