ಸುಳ್ಯ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘ ಕ್ಕೆ 2021-22 ನೇ ಸಾಲಿನ ವಿಶಿಷ್ಟ ಸಾಧನಾ ಪ್ರಶಸ್ತಿ

0

ಸುಳ್ಯದಲ್ಲಿ ಕಳೆದ 24 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಸಂಸ್ಥೆಗೆ 2021.22 ವಿಶಿಷ್ಟ ಸಾಧನಾ ಪ್ರಶಸ್ತಿ ಲಭಿಸಿದೆ.


ಈ ಪ್ರಶಸ್ತಿಯನ್ನು ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.. ನೀಡುತ್ತಿದ್ದು ಸುಳ್ಯ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘ ತನ್ನ ಕಾರ್ಯ ವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಟ ಸಾಧನೆ ಗುರುತಿಸಿ ಈ ಪ್ರಶಸ್ತಿಗೆ ಭಾಜನವಾಗಿದೆ.
ಪ್ರಶಸ್ತಿಯನ್ನು ಅಗಸ್ಟ್ 5 ರಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಇದರ ಮಂಗಳೂರಿನ ಕೊಡಿಯಾಲ ಬೈಲ್ ಪ್ರಧಾನ ಕಚೇರಿಯಲ್ಲಿ ಸ್ವೀಕರಿಸಲಾಗುವುದು ಎಂದು ಸುಳ್ಯ ಅಲ್ಪಸಂಖ್ಯಾತರ ಸೊಸೈಟಿ ಅಧ್ಯಕ್ಷ ಇಕ್ಬಾಲ್ ಎಲಿಮಲೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.