ಜೆಡಿಎಸ್ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸುಳ್ಯದ ಎಂ.ಬಿ. ಸದಾಶಿವ ನೇಮಕ

0

ಜೆಡಿಎಸ್ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸುಳ್ಯದ ಎಂ.ಬಿ. ಸದಾಶಿವ ನೇಮಕಗೊಂಡಿದ್ದಾರೆ.

ಎಂ.ಬಿ. ಸದಾಶಿವರವರು ಹಿರಿಯ ಜೆಡಿಎಸ್ ಮುಖಂಡರಾಗಿದ್ದು, ಸುಳ್ಯದಲ್ಲಿ ಉದ್ಯಮಿಯಾಗಿದ್ದಾರೆ. ಈ ಹಿಂದೆ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಉಪಾಧ್ಯಕ್ಷರಾಗಿಯೂ ಎಂ.ಬಿ. ಸದಾಶಿವರು ಕಾರ್ಯನಿರ್ವಹಿಸಿದ್ದರು.

ನಿನ್ನೆ ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷದ ಸಾಂಸ್ಥಿಕ ಚುನಾವಣೆ ನಡೆದಿದ್ದು, ಒಟ್ಟು 65 ಸದಸ್ಯರಿರುವ ರಾಜ್ಯ ಕಾರ್ಯಕಾರಿ ಸಮಿತಿಯನ್ನು ಘೋಷಿಸಲಾಗಿದೆ.