ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಮಾತ್ರ ನಿರ್ಬಂಧ

0
786

ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್‌ಕುಮಾರ್ ಸ್ಪಷ್ಟನೆ

p>

ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ ಎಂಬ ವರದಿಗೆ ಬೆಳ್ಳಾರೆಯಲ್ಲಿ ಸ್ಪಷ್ಟನೆ ನೀಡಿರುವ ಎಡಿಜಿಪಿ ಅಲೋಕ್ ಕುಮಾರ್‌ರವರು ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರನಿಗೆ ನಿಷೇಧ ಹೇರಿರುವಂಥದ್ದು ಕೇವಲ ಸಂಜೆ ಆರು ಗಂಟೆಯಿಂದ ಬೆಳಗಿನ ಜಾವ ಆರರವರೆಗೆ ಮಾತ್ರ ಎಂದಿದ್ದಾರೆ.
ಇಂದು (ಆ.4 ರಂದು) ಬೆಳ್ಳಾರೆ ಪೊಲೀಸ್ ಠಾಣೆಗೆ ಭೇಟಿ ನೀಡಿದ ಬಳಿಕ ಈ ವಿಷಯ ತಿಳಿಸಿದರು.


ಇತ್ತೀಚೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಅಪರಾಧ ಘಟನೆಗಳನ್ನು ಗಣನೆಗೆ ತೆಗೆದುಕೊಂಡು ಅಪರಾಧಗಳನ್ನು ತಡೆಗಟ್ಟುವ ಉದ್ದೇಶಕ್ಕಾಗಿ ಈ ರೀತಿಯ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಮಹಿಳೆಯರಿಗೆ, ಮಕ್ಕಳಿಗೆ ಹಾಗೂ ವೃದ್ಧರಿಗೆ ಅನ್ವಯವಾಗುವುದಿಲ್ಲ. ಒಂದು ವಾರದವರೆಗೆ ಈ ನಿರ್ಬಂಧ ಇರಲಿದೆ, ಸಾರ್ವಜನಿಕರು ಸಹಕರಿಸುವಂತೆ ಕೇಳಿಕೊಂಡರು.

LEAVE A REPLY

Please enter your comment!
Please enter your name here