ಸುಳ್ಯ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ್ ಎ. ವರ್ಗಾವಣೆ

0
669

 

p>

ವಿವಿಧ ಇಲಾಖೆಗಳ ವತಿಯಿಂದ ಬೀಳ್ಕೊಡುಗೆ ಸಮಾರಂಭ

ಸುಳ್ಯ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ್ ಎ ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದು ಸುಳ್ಯ ತಾಲೂಕಿನ ವಿವಿಧ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ ಸುಳ್ಯ ಕನ್ನಡ ಭವನ ಸಭಾಂಗಣದಲ್ಲಿ ಅ 4 ರಂದು ನಡೆಯಿತು.

ಕಳೆದ ಒಂದು ವರ್ಷಗಳಿಂದ ಸುಳ್ಯ ನ್ಯಾಯಾಲಯದ ಹಿರಿಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿರುವ ಇವರು ಕಾನೂನು ಅರಿವು ಕಾರ್ಯಕ್ರಮಗಳನ್ನು ಸುಳ್ಯ ತಾಲೂಕಿನಾದ್ಯಂತ ನಡೆಸಿ ಜನಸ್ನೇಹಿ ನ್ಯಾಯಾಧೀಶರಾಗಿ ಸಾರ್ವಜನಿಕ ವಲಯದಲ್ಲಿ ಗುರುತಿಸಿಕೊಂಡಿದ್ದರು.
ಇವರ ಅವಧಿಯಲ್ಲಿ ಸುಳ್ಯ ನ್ಯಾಯಾಲಯದಲ್ಲಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪುಗಳನ್ನು ನೀಡಿ ಉತ್ತಮ ನ್ಯಾಯಾಧೀಶರೆಂದು ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಬೀಳ್ಕೊಡುಗೆ ಸಮಾರಂಭದಲ್ಲಿ ನ್ಯಾಯಾಲಯದ ಸಿಬ್ಬಂದಿಗಳು, ಎ ಪಿ ಪಿ ಜನಾರ್ಧನ್, ಸುಳ್ಯ ಪೊಲೀಸ್ ಇಲಾಖೆ , ಅರಣ್ಯ ಇಲಾಖೆ, ಶಿಕ್ಷಣ ಇಲಾಖೆ, ಎಂಬಿ ಫೌಂಡೇಶನ್, ಕರ್ನಾಟಕ ವಿ ಕೆ ಜೋಡಿತಾರೆ ಪ್ರಶಸ್ತಿ ಪುರಸ್ಕೃತ ಪೂರ್ಣಿಮಾ ಕೃಷ್ಣ ರಾಜ್, ಅಂಬೇಡ್ಕರ್ ರಕ್ಷಣಾ ವೇದಿಕೆ, ಮಲೆನಾಡು ಚಾರಿಟೇಬಲ್ ಟ್ರಸ್ಟ್, ಇವರವತಿಯಿಂದ ನ್ಯಾಯಾಧೀಶರಿಗೆ ಶಾಲು ಹೊದಿಸಿ, ಸ್ಮರಣಿಕೆಯನ್ನು ನೀಡಿ ಸನ್ಮಾನಿಸಲಾಯಿತು.
ಸಮಾರಂಭದ ವೇದಿಕೆಯಲ್ಲಿ ಉಪಸ್ಥಿತರಿದ್ದ ಸುಳ್ಯ ನ್ಯಾಯಾಲಯದ ಸಿವಿಲ್ ಕಿರಿಯ ನ್ಯಾಯಾಧೀಶೆ ಅರ್ಪಿತಾ, ಸುಳ್ಯ ತಹಶೀಲ್ದಾರ್ ಕು.ಅನಿತಾ ಲಕ್ಷ್ಮಿ, ಪುತ್ತೂರು ವಿಭಾಗದ ಡಿವೈಎಸ್ಪಿ ಡಾ. ಪಿ ಗಾನ ಕುಮಾರ್, ಸುಳ್ಯ ವಲಯ ಅರಣ್ಯ ಅಧಿಕಾರಿ ಗಿರೀಶ್, ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ನಗರ ಪಂಚಾಯತ್ ಮುಖ್ಯ ಅಧಿಕಾರಿ ಸುಧಾಕರ್, ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಎಂಬಿ ಫೌಂಡೇಶನ್ ಅಧ್ಯಕ್ಷ ಎಂ ಬಿ ಸದಾಶಿವ ವರ್ಗಾವಣೆಗೊಂಡ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ್ ಎ ರವರ ಒಂದು ವರ್ಷದ ಸೇವೆಯ ಕುರಿತು ಪ್ರಸಂಶನೀಯ ಮಾತುಗಳನ್ನಾಡಿ ಅವರಿಗೆ ಶುಭ ಹಾರೈಸಿದರು.
ಸಭೆಯಲ್ಲಿ ಭಾಗವಹಿಸಿದ್ದ ಸುಳ್ಯ ವಕೀಲರ ಸಂಘದ ಮಾಜಿ ಅಧ್ಯಕ್ಷ ಎಂ ವೆಂಕಪ್ಪಗೌಡ, ಸುದ್ದಿ ಪತ್ರಿಕೆಯ ವರದಿಗಾರ ಹಸೈನಾರ್ ಜಯನಗರ, ಉಪನ್ಯಾಸಕ ಕೃಷ್ಣರಾಜ್ ಈ ಸಂದರ್ಭದಲ್ಲಿ ಮಾತನಾಡಿ ಶುಭಹಾರೈಸಿದರು.
ಬೀಳ್ಕೊಡುಗೆ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ನ್ಯಾಯಾಧೀಶ ಸೋಮಶೇಖರ್ ಎ ಸುಳ್ಯದ ಜನತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ನ್ಯಾಯಾಲಯದಲ್ಲಿ ನಡೆಯುವ ಕಾನೂನು ಅರಿವು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಸುಳ್ಯ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳ ಭಾಗವಹಿಸುವಿಕೆ ಮತ್ತು ಕಾರ್ಯಕ್ಷಮತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಳೆದ ಐದು ತಿಂಗಳ ಹಿಂದೆ ವೈಯುಕ್ತಿಕ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವರ್ಗಾವಣೆಯನ್ನು ಕೋರಿ ಮಾನ್ಯ ಹೈಕೋರ್ಟಿಗೆ ಮನವಿಯನ್ನು ಸಲ್ಲಿಸಿದ್ದೆ. ನನ್ನ ಮನವಿಯನ್ನು ಸ್ವೀಕರಿಸಿರುವ ಮಾನ್ಯ ನ್ಯಾಯಾಲಯ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುವ ಅವಕಾಶವನ್ನು ನನಗೆ ನೀಡಿರುವ ಹಿನ್ನೆಲೆಯಲ್ಲಿ ಇಷ್ಟು ಬೇಗನೆ ಸುಳ್ಯದಿಂದ ಹೋಗಬೇಕಾಗಿ ಬಂದಿದೆ. ಕಳೆದ ಒಂದು ವರ್ಷಗಳಿಂದ ನನಗೆ ಸುಳ್ಯದ ಜನತೆಯ ಸೇವೆ ಮಾಡುವ ಅವಕಾಶಕ್ಕೆ ಸಂತೋಷ ತಂದಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್, ಬೆಳ್ಳಾರೆ ಪೊಲೀಸ್ ಠಾಣಾ ಉಪನಿರಿಕ್ಷಕ ,ಸುಳ್ಯ ತಾಲೂಕು ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಜೆ ಕೆ ರೈ, ಅಂಬೇಡ್ಕರ್ ರಕ್ಷಣಾ ವೇದಿಕೆ ಅಧ್ಯಕ್ಷ ಸುಂದರ ಪಾಟಾಜೆ, ಮಲೆನಾಡು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಿಯಾಜ್ ಕಟ್ಟೇಕರ್, ದೈಹಿಕ ಶಿಕ್ಷಕ ನಟರಾಜ್, ಶಿಕ್ಷಣ ಇಲಾಖೆ ಅಧಿಕಾರಿಗಳು, ಸುಳ್ಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸತೀಶ್, ಕೋರ್ಟ್ ಸಿಬ್ಬಂದಿ ವರ್ಗದವರು, ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುಳ್ಯ ನ್ಯಾಯಾಲಯದ ಎಪಿಪಿ ಜನಾರ್ದನ್ ಬಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ, ಕೋರ್ಟ್ ಸಿಬ್ಬಂದಿ ಬೊಮ್ಮಯ್ಯ ಗೌಡ ವಂದಿಸಿದರು.

 

LEAVE A REPLY

Please enter your comment!
Please enter your name here