ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ – ಸನ್ಮಾನ

0

 

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ
2021-22 ನೇ ಸಾಲಿನಲ್ಲಿ ಸಂಘದ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಪ್ರೋತ್ಸಾಹಕ ಪ್ರಶಸ್ತಿ ಆಯ್ಕೆ ಗೊಂಡಿದ್ದು,ಆ.5 ರಂದು ಮಂಗಳೂರಿನಲ್ಲಿ ಜರುಗಿದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.


ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಕುಳ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ .ನೇಮಿರಾಜ ಪಲ್ಲೋಡಿ ಯವರನ್ನು ಶಾಲು ,ಹೊದಿಸಿ, ಫಲ ಪುಷ್ಪ ಸ್ಮರಣಿಕೆ, ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಬ್ಯಾಂಕಿನ ನಿರ್ದೇಶಕರು, ಪಂಜ ಪ್ರಾ.ಕೃ.ಪ.ಸಹಕಾರ ಸಂಘದ ನಿರ್ದೇಶಕರಾದ ಶ್ರೀಕೃಷ್ಣ ಭಟ್ ಪಟೋಳಿ, ಚಿನ್ನಪ್ಪ ಚೊಟ್ಟೆಮಜಲು, ವಾಚಣ್ಣ ಕೆರೆಮೂಲೆ,ಪಂಜ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಚನಿಯಪ್ಪ ಕುಳ್ಳಕೋಡಿ ಉಪಸ್ಥಿತರಿದ್ದರು.