ಬೆಳ್ಳಾರೆ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರಿ ಜಿಲ್ಲಾ ಪ್ರಶಸ್ತಿ

0

 

 

ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2021-22 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ಜಿಲ್ಲಾ ಬ್ಯಾಂಕ್ ಉತ್ತಮ ಸಹಕಾರಿ ಪ್ರಶಸ್ತಿಯನ್ನು ನೀಡಲಾಯಿತು.

ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್ ರಾಜೇಂದ್ರ ಕುಮಾರ್ ರವರು ಆ.05 ರಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲು ಮತ್ತು ಮುಖ್ಯಕಾರ್ಯ ನಿರ್ವಹಣಾಧಿಕಾರಿ ವಿಜಯ ರೈಯವರನ್ನು ಪ್ರಶಸ್ತಿ,ಸ್ಮರಣಿಕೆ ನೀಡಿ ಸನ್ಮಾನಿಸಿದರು.
ಇತ್ತೀಚೆಗೆ ನಿವೃತ್ತಿ ಹೊಂದಿದ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಈಶ್ವರ ಆಳ್ವರನ್ನು ಶಾಲು ಹೊದಿಸಿ ಫಲ,ಪುಷ್ಪ ಸ್ಮರಣಿಕೆ ನೀಡಿ ಜಿಲ್ಲಾ ಬ್ಯಾಂಕಿನ ಅಧ್ಯಕ್ಷರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಡಿ.ಸಿ.ಬ್ಯಾಂಕ್ ನಿರ್ದೇಶಕರು, ಸಹಕಾರಿ ಸಂಘದ ನಿರ್ದೇಶಕರಾದ ಕರುಣಾಕರ ಆಳ್ವ,ವಿಠಲದಾಸ್ ಎನ್.ಎಸ್.ಡಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.