ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ವರಮಹಾಲಕ್ಷ್ಮೀ ಪೂಜೆ

0

 

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮರಕತದಲ್ಲಿ ಆ.5 ರಂದು 14 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ ಸಾಂಗವಾಗಿ ನಡೆಯಿತು.


ಮರಕತ ಸಿದ್ಧಿಧಾತ್ರಿ ಸಭಾಭವನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಕಾರ್ಯಕ್ರಮ ನಡೆದಿದ್ದು ಶ್ರೀ ದುರ್ಗಾಪರಮೇಶ್ವರಿ ಉಪಾಸನಾ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು, ದೇವಸ್ಥಾನ ವ್ಯವಸ್ಥಾಪನಾ ಸಮಿತಿಯವರು, ಶ್ರೀ ದುರ್ಗಾ ಭಜನಾ ಮಂಡಳಿಯವರು ಸಹಕರಿಸಿದರು. ನೂರಾರು ಸಂಖ್ಯೆಯ ಭಕ್ತರು ವರಮಹಾಲಕ್ಷ್ಮಿ ಪೂಜೆಯಲ್ಲಿ ಪಾಲ್ಗೊಂಡರು. ಮಧ್ಯಾಹ್ನ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.